ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅದರಿಂದಾಗುತ್ತಿರುವ ಅನಾಹುತಗಳು ಮುಂದುವರೆದಿದ್ದು, ಈವರೆಗೆ 28 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಹೆಚ್ಚುವ ಆತಂಕವಿದೆ. ಅತ್ತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಡಾರ್ಜೀಲಿಂಗ್/ಸಿಲಿಗುರಿ/ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅದರಿಂದಾಗುತ್ತಿರುವ ಅನಾಹುತಗಳು ಮುಂದುವರೆದಿದ್ದು, ಈವರೆಗೆ 28 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಹೆಚ್ಚುವ ಆತಂಕವಿದೆ. ಅತ್ತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಭೂಕುಸಿತದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರ್ಗಾ ಪೂಜೆಗಾಗಿ ಬಂದಿದ್ದ ಸಾವಿರಾರು ಪ್ರವಾಸಿಗರು ಅತಂತ್ರರಾಗಿದ್ದಾರೆ. ಸಿಲಿಗುರಿ ಭೇಟಿಗೆ ಹೊರಟಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ‘ಈ ಪ್ರವಾಹ ಮತ್ತು ಅದರಿಂದಾಗಿರುವ ವಿನಾಶ ಮಾನವರಿಂದಲೇ ಆಗಿದ್ದು’ ಎಂದರು.
ಜತೆಗೆ, ಮೃತರ ಕುಟುಂಬದವರಿಗೆ 5 ಲಕ್ಷ ರು. ಪರಿಹಾರವನ್ನೂ ಘೋಷಿಸಿದರು. ಪರಿಸ್ಥಿತಿ ಬಗ್ಗೆ ಮಾತನಾಡಿದ ಅಧಿಕಾರಿಗಳು, ‘ಈವರೆಗೆ ಮೃತ 23 ಮಂದಿಯ ವಿವರಗಳು ಲಭಿಸಿದೆ. 12 ತಾಸು ಸುರಿದ 300 ಎಂಎಂ ಮಳೆಯಿಂದ ಮಿರಿಕ್, ಸುಖಿಯಾಪೊಕ್, ಜೋರ್‌ಬಂಗ್ಲೋರಿಯಲ್ಲಿ ಭಾರೀ ಹಾನಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ’ ಎಂದರು.
2 ದಿನ 15 ಜಿಲ್ಲೆಗಳಲ್ಲಿ ಮಳೆಯ ‘ಯೆಲ್ಲೋ ಅಲರ್ಟ್’
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ (Coastal) ಅಕ್ಟೋಬರ್ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ (Rain).
ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.
ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ (kolar), ಚಿಕ್ಕಬಳ್ಳಾಪುರ (Chikkaballapura), ಚಾಮರಾಜನಗರ (Chamarajanagar), ಮೈಸೂರು, ಕೋಲಾರ, ಮಂಡ್ಯ (Mandya), ರಾಮನಗರ (Ramanagara), ಶಿವಮೊಗ್ಗ (shivamogga), ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಕೇರಳ ಮಳೆ ಭೀಕರತೆ: ತಬ್ಬಿದ ಸ್ಥಿತಿಯಲ್ಲಿ ತಾಯಿ, ಮಗು ಶವಪತ್ತೆ!
ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ (Udupi), ದಕ್ಷಿಣ ಕನ್ನಡ ಜಿಲ್ಲೆಗೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಅ.27 ಮತ್ತು ಅ.28ರಂದು ಮಳೆಯ ಅಬ್ಬರ ಇರುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಬೀದರ್‌ನಲ್ಲಿ (Bidar) ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಮತ್ತು ಶಿರಾಲಿಯಲ್ಲಿ ಗರಿಷ್ಠ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣತೆ ವರದಿಯಾಗುತ್ತಿದ್ದು ಚಳಿಯ ವಾತಾವರಣ ಇದೆ.
