ಆಹಾರಧಾನ್ಯಗಳ ಮೇಲೆ ಜಿಎಸ್‌ಟಿಗೆ ವಿರೋಧ: ಎರಡು ದಿನ ರೈಸ್ ಮಿಲ್ ಬಂದ್
ಜಿಎಸ್ ಟಿ ಮಂಡಳಿಯು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ.5ರಷ್ಟು ಜಿಎಸ್‌ಟಿ ವಿರೋಧಿಸಿ ಜುಲೈ 15 ಮತ್ತು 16ರಂದು ಜಿಲ್ಲೆಯ ಎಲ್ಲಾ ಅಕ್ಕಿ ಗಿರಣಿಗಳನ್ನು ಬಂದ್ ಮಾಡುವ ಜೊತೆ ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ದಾವಣಗೆರೆ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘ ತೀರ್ಮಾನಿಸಿದೆ.
ದಾವಣಗೆರೆ (ಜುಲೈ14): ಜಿಎಸ್ ಟಿ ಮಂಡಳಿಯು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ.5ರಷ್ಟು ಜಿಎಸ್‌ಟಿ ವಿರೋಧಿಸಿ ಜುಲೈ 15 ಮತ್ತು 16ರಂದು ಜಿಲ್ಲೆಯ ಎಲ್ಲಾ ಅಕ್ಕಿ ಗಿರಣಿಗಳನ್ನು ಬಂದ್ ಮಾಡುವ ಜೊತೆ ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ದಾವಣಗೆರೆ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘ ತೀರ್ಮಾನಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ, ಇತ್ತೀಚೆಗೆ ಕೇಂದ್ರ ಸರ್ಕಾರ ಜೂನ್ 28 ಮತ್ತು 29 ರಂದು ಜಿಎಸ್‌ಟಿ ಮಂಡಳಿಯು ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ತೆರಿಗೆ ವಿಧಿಸಿದೆ. ಇದು ದೇಶದಾದ್ಯಂತ ಜುಲೈ 18 ರಿಂದ ಜಾರಿಗೆ ಬರಲಿದೆ. ಇದರಿಂದ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದಿನನಿತ್ಯ ಬಳಸುವ ಆಹಾರ ಧಾನ್ಯಗಳಾದ ಅಕ್ಕಿ, ಜೋಳ, ರಾಗಿ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಲಿದೆಎಂದು ಹೇಳಿದರು.
ಅನ್ನಭಾಗ್ಯ ಅಕ್ಕಿ ಗಿರಣಿ ಮಾಲಿಕನಿಗೆ 10 ಕೋಟಿ ರೂ ಬಾಕಿ ಉಳಿಸಿಕೊಂಡಿದೆ ಸರ್ಕಾರ, ಆಹಾರ ಸಚಿವರೇ ಗಮನಿಸಿ
ತೆರಿಗೆಯಿಂದಾಗಿ ಜನ ಸಾಮಾನ್ಯರ ಜೀವನ ವೆಚ್ಚ ಹೆಚ್ಚಾಗಲಿದೆ. ಹೀಗಾಗಿ ತೆರಿಗೆ ಕೈ ಬಿಡಬೇಕು. ಈಗಾಗಲೇ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹಲವಾರು ಸಂಘ ಸಂಸ್ಥೆಗಳ ಮೂಲಕ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯು ಈ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಇದನ್ನು ಖಂಡಿಸಿ ಪ್ರತಿಭಟನೆ ಮೂಲಕ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದರು.
ಇದೇ 15ರಂದು ದಾವಣಗೆರ ಜಿಲ್ಲಾ ಅಕ್ಕಿಗಿರಣಿ ಮಾಲೀಕರ ಸಂಘ, ಆಹಾರ ಧಾನ್ಯಗಳ ವರ್ತಕ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಅಲ್ಲದೇ ಎರಡೂ ದಿನ ಎಲ್ಲಾ ವ್ಯಾಪಾರ ಉದ್ಯಮದ ವಹಿವಾಟನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ. ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ 90ಕ್ಕೂ ಹೆಚ್ಚು ಸಗಟು ವ್ಯಾಪಾರಗಳು ಬಂದ್ ಆಗಲಿವೆ ಎಂದು ಹೇಳಿದರು.
GST Rates Revised:ಜಿಎಸ್ ಟಿ ದರ ಪರಿಷ್ಕರಣೆ; ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ
ವರ್ತಕರು, ಕಾಂಗ್ರೆಸ್ ಮುಖಂಡರು ಆದ ಶಾಮನೂರು ಶಿವಶಂಕರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಹಾರ ಧಾನ್ಯಗಳ ಮೇಲಿನ ಜಿಎಸ್‌ಟಿಯನ್ನು ಖಂಡಿಸಿದ್ದಾರೆ. ಇದರಿಂದ ಅಕ್ಕಿ ಇತರ ದವಸಧಾನ್ಯಗಳ ಬೆಲೆ ಹೆಚ್ಚುತ್ತದೆ ಇದು ಗ್ರಾಹಕರ ಮೇಲೆ ಬಿದ್ದು ಮತ್ತಷ್ಟು ಬೆಲೆ ಏರಿಕೆಗೆ ಶೇ 5 ರಷ್ಟು ಕಾರಣವಾಗುತ್ತದೆ ಕೇಂದ್ರ ಸರ್ಕಾರ ಇದನ್ನು ಪರಿಶೀಲಿಸಬೇಕೆಂದು ಅವರು ಆಗ್ರಹಿಸಿದ್ದಾರೆ.