Asianet Suvarna News Asianet Suvarna News

ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ, ಕಠಿಣ ಕಾನೂನು ಮಸೂದೆ ಮಂಡಿಸಿದ ಅಮಿತ್ ಶಾ!

ದೇಶದಲ್ಲಿ ಅಪರಾಧಗಳನ್ನು ತಡೆಯಲು ಕೇಂದ್ರ ಸರ್ಕಾರ ಶಿಕ್ಷೆ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಿದೆ.ಮಹಿಳೆ ಹಾಗೂ ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಮಂಡಿಸಿದ್ದಾರೆ

Death penalty for minor rape Amit shah introduced  new bills to overhaul Indian criminal laws ckm
Author
First Published Aug 11, 2023, 7:51 PM IST

ನವದೆಹಲಿ(ಆ.11) ಅಧಿವೇಶನದ ಕೊನೆಯ ದಿನ ಕೇಂದ್ರ ಸರ್ಕಾರ ಐತಿಹಾಸಿಕ ಮಸೂದೆಗಳನ್ನು ಮಂಡಿಸಿದೆ. ಬ್ರಿಟೀಷರ ಕಾಲದಲ್ಲಿ ರಚಿಸಲಾದ ಕಾನೂನುಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸದ್ಯ ಭಾರತದ ಪರಿಸ್ಥಿತಿ ಹಾಗೂ ಭಾರತೀಯ ನಾಗರೀಕರ ರಕ್ಷಣೆಗಾಗಿ ಪರಿಷ್ಕೃತ ಬಿಲ್ ಮಂಡಿಸಲಾಗಿದೆ. ಹೊಸ ಮಸೂದೆಯಲ್ಲಿನ ಕಾನೂನುಗಳ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಪ್ರಮುಖವಾಗಿ ಮಹಿಳೆ ಹಾಗೂ ಮಕ್ಕಳ ವಿರುದ್ಧದ ಅಪರಾಧಕ್ಕೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೊಸ ನಿಯಮದ ಪ್ರಕಾರ ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಇನ್ನು ಗ್ಯಾಂಗ್ ರೇಪ್ ಸೇರಿದಂತೆ ಇತರ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಮುಂಗಾರು ಅಧಿವೇಶನದ ಕೊನೆಯ ದಿನ ಅಮಿತ್ ಶಾ ಮಹತ್ವದ ಮಸೂದೆ ಮಂಡಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಮಸೂದೆ, ಭಾರತೀಯ ಪುರಾವೆ ಮಸೂದೆ ಮತ್ತು ಭಾರತೀಯ ನಾಗರಿಕ ರಕ್ಷಣಾ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮೂಲಕ ಮಹಿಳೆಯರು, ಹೆಣ್ಣು ಮಕ್ಕಳು ಮೇಲಿನ ಅಪರಾಧಕ್ಕೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗಿದೆ. ಈ ಮೂರು ತಿದ್ದುಪಡಿ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಕಳುಹಿಸಲಾಗುವುದು ಎಂದು ಅಮಿತಿ ಶಾ ಸದನದಲ್ಲಿ ಹೇಳಿದರು.

ಇನ್ಮುಂದೆ ದೇಶದ್ರೋಹ ಕಾನೂನು ರದ್ದು; ಬ್ರಿಟಿಷರ ಕಾಲದ ಐಪಿಸಿ, ಸಿಆರ್‌ಪಿಸಿ ಸೇರಿ 3 ಕಾಯ್ದೆ ಬದಲು: ಅಮಿತ್‌ ಶಾ ಮಹತ್ವದ ಘೋಷಣೆ

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಅಪರಾಧಿಗೆ 20 ವರ್ಷ ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸಾಮೂಹಿಕ ಹತ್ಯೆ, ಲಿಂಚಿಂಗ್ ಸೇರಿದಂತೆ ಇತರ ಅಪರಾಧ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಭಾರತದಲ್ಲಿ ಅಪರಾಧಿಗಳಿಗೆ ಭಯ ಹುಟ್ಟಿಸುವ ಹಾಗೂ ಅಪರಾಧಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕಠಿಣ ಕಾನೂನುಗಳ ಅವಶ್ಯಕತೆ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ.

 

 

ಗುರುತು ನೆಪವಾಗಿಟ್ಟುಕೊಂಡು ದೈಹಿಕ ಸಂಬಂಧ ಬೆಳೆಸಿದರೆ ಹೊಸ ಕೂನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುತ್ತದೆ. ಎಫ್ಐಆರ್ ಎಲ್ಲಿಂದ ಬೇಕಾದರು ದಾಖಲಿಸಬಹುದು. ಪೊಲೀಸರು 90 ದಿನಗಳಲ್ಲಿ ಎಫ್ಐಆರ್ ಮಾಹಿತಿ ವರದಿ ನವೀಕರಣ ಮಾಡಬೇಕು ಎಂದು ಹೊಸ ಕಾನೂನು ಹೇಳುತ್ತದೆ.

1860 ರಿಂದ 2023ರ ವರೆಗೆ ಬ್ರಿಟಿಷರ ಕಾನೂನಿನಂತೆ ಕಾರ್ಯನಿರ್ವಹಿಸಿದೆ. ಇದೀಗ ಭಾರತದ ನಾಗರೀಕರ ರಕ್ಷಣೆ, ಅಪರಾಧದ ತೀ್ವ್ರತೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
 

Follow Us:
Download App:
  • android
  • ios