Asianet Suvarna News Asianet Suvarna News

ಮಹಾರಾಷ್ಟ್ರ, ದಿಲ್ಲಿಯಲ್ಲಿ ಇನ್ನು ಮಾಸ್ಕ್‌ ಕಡ್ಡಾಯವಲ್ಲ: ಎರಡು ವರ್ಷಗಳ ಬಳಿಕ ನಿಯಮ ರದ್ದು

  • ಕಡ್ಡಾಯ ಮಾಸ್ಕ್ ನಿಯಮ ತೆಗೆದು ಹಾಕಿದ ರಾಜ್ಯಗಳು
  • ಮಹಾರಾಷ್ಟ್ರ, ದೆಹಲಿಯಲ್ಲಿ ಮಾಸ್ಕ್‌ ಕಡ್ಡಾಯವಲ್ಲ
  • ರಾಜ್ಯ ಸರ್ಕಾರಗಳ ಘೋಷಣೆ
delhi and maharashtra govt lift compulsory mask rules akb
Author
Bangalore, First Published Apr 1, 2022, 4:37 AM IST

ಮುಂಬೈ: ಕೋವಿಡ್‌ ಹಿನ್ನೆಲೆಯಲ್ಲಿ ದೇಶದ ಪ್ರತಿ ನಾಗರಿಕರಿಗೂ ಕಡ್ಡಾಯವಾಗಿದ್ದ ಮಾಸ್ಕ್‌ ಧಾರಣೆ ನಿಯಮವನ್ನು ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ತೆಗೆದು ಹಾಕಲಾಗಿದೆ. ಕೋವಿಡ್‌ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಏ.2 ರಿಂದ ಎಲ್ಲ ಕೋವಿಡ್‌ ಸಂಬಂಧಿತ ನಿರ್ಬಂಧನೆಯನ್ನು ತೆಗೆದು ಹಾಕಲಾಗುವುದು. ಇನ್ನು ರಾಜ್ಯದಲ್ಲಿ ಮಾಸ್ಕ್ ಬಳಕೆ ಐಚ್ಛಿಕವಾಗಿರುತ್ತದೆ ಎಂದು ರಾಜ್ಯ ಸರ್ಕಾರ ಗುರುವಾರ ಘೋಷಣೆ ಮಾಡಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಗುರುವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ ಎಂಬ ನಿಯಮವನ್ನು ರದ್ದುಗೊಳಿಸಿದೆ. ಪ್ರಸ್ತುತ ದೆಹಲಿಯಲ್ಲಿ ಮಾಸ್ಕ್‌ ಹಾಕದೇ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವವರಿಗೆ 500 ರು. ದಂಡ ವಿಧಿಸಲಾಗುತ್ತದೆ. ಈ ನಿಯಮವನ್ನು ತೆಗೆದು ಹಾಕಲಾಗಿದ್ದು, ಮಾಸ್ಕ್‌ ಧರಿಸದವರಿಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ.

UK Covid rules ಮಾಸ್ಕ್, ನೆಗಟೀವ್ ವರದಿ ಕಡ್ಡಾಯವಲ್ಲ ಯುಕೆಯಲ್ಲಿ ಕೊರೋನಾ ನಿಯಮ ಸಡಿಲಿಕೆ!

ವಾರದ ಹಿಂದಷ್ಟೇ ಕೇಂದ್ರ ಆರೋಗ್ಯ (health) ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಫೇಸ್‌ಮಾಸ್ಕ್ (Face Mask)ನಿಯಮ ಮತ್ತು ಕೈ ಸ್ವಚ್ಛತೆಯ ಪ್ರೋಟೋಕಾಲ್‌ಗಳ  ಬಗ್ಗೆ ಸಡಿಲಿಕೆ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳು ಸುಳ್ಳಾಗಿದ್ದು, ಕೋವಿಡ್ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದು ಹೇಳಿತ್ತು. COVID-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂಬ ವಿಚಾರ ಅಸತ್ಯ. ಕೆಲವು ಮಾಧ್ಯಮ ವರದಿಗಳು ಮಾಸ್ಕ್ ಧರಿಸುವುದು ಮತ್ತು ಕೈ ನೈರ್ಮಲ್ಯ #COVID19 ಪ್ರೋಟೋಕಾಲ್‌ಗಳಿಗೆ (Covid protocal) ರಿಲೀಫ್‌ ನೀಡಲಾಗಿದೆ ಎಂದು ಸೂಚಿಸುತ್ತಿವೆ. ಇವುಗಳು ಅಸತ್ಯ. ಫೇಸ್ ಮಾಸ್ಕ್ ಮತ್ತು ಕೈ ನೈರ್ಮಲ್ಯವೂ ಕೋವಿಡ್ ನಿರ್ವಹಣಾ ಕ್ರಮಗಳಿಗೆ ಅಗತ್ಯವಾಗಿದ್ದು, ಈ ನಿಯಮವನ್ನು ಮುಂದುವರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಿಂದ ಟ್ವೀಟ್ ಮಾಡಿತ್ತು.

Belagavi: ಕೋವಿಡ್‌ ರೂಲ್ಸ್‌ ಬ್ರೇಕ್‌: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ FIR

ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪಾಲನೆಯನ್ನು ನಿಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದನ್ನು ಫೇಸ್‌ಮಾಸ್ಕ್ ನಿಯಮವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಮಾಧ್ಯಮದ ಕೆಲವು ವಿಭಾಗಗಳಲ್ಲಿ ತಪ್ಪಾಗಿ ವರದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ಸ್ಪಷ್ಟನೆ ನೀಡಿದೆ. ಈ ಸಂದರ್ಭದಲ್ಲಿ, ಅನೇಕ ರಾಜ್ಯ ಸರ್ಕಾರಗಳು ಮಾಸ್ಕ್ ಧರಿಸುವುದನ್ನು ಮತ್ತು ಕೋವಿಡ್ ಸೂಕ್ತ ನಿಯಮಾವಳಿಗಳನ್ನು ಜಾರಿಗೊಳಿಸಲು ಸಾಂಕ್ರಾಮಿಕ ರೋಗಗಳ ಕಾಯ್ದೆಯ ನಿಬಂಧನೆಗಳನ್ನು ಸಹ ಆಹ್ವಾನಿಸಿವೆ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ.

ಸಾಂಕ್ರಾಮಿಕ ಪರಿಸ್ಥಿತಿಯಲ್ಲಿನ ಒಟ್ಟಾರೆ ಸುಧಾರಣೆಯ ದೃಷ್ಟಿಯಿಂದ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯಿದೆ 2005ರ ಪಾಲನೆಯನ್ನು ನಿಲ್ಲಿಸುವಂತೆ ಶಿಫಾರಸು ಮಾಡಿದೆ. NDMA ಶಿಫಾರಸನ್ನು ಗಮನಿಸಿ ಕೇಂದ್ರ ಗೃಹ ಕಾರ್ಯದರ್ಶಿಯವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊರಡಿಸಲಾದ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ಸ್ಥಗಿತಗೊಳಿಸುವಂತೆ ಪತ್ರ ಬರೆದಿದ್ದಾರೆ. ಆದ್ದರಿಂದ, ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ DM ಕಾಯಿದೆ, 2005 ರ ಅಡಿಯಲ್ಲಿ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ಸೂಕ್ತವಾಗಿ ಸ್ಥಗಿತಗೊಳಿಸುವುದನ್ನು ಪರಿಗಣಿಸಲು ನಾನು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡುತ್ತೇನೆ ಎಂದು ಗೃಹ ಕಾರ್ಯದರ್ಶಿ 22ನೇ ಮಾರ್ಚ್ 2022 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios