ಫೆಬ್ರವರಿ 5ಕ್ಕೆ ದೆಹಲಿ ವಿಧಾನಸಭೆ ಚುನಾವಣೆ: ಫೆ.8ಕ್ಕೆ ಫಲಿತಾಂಶ

ಫೆಬ್ರವರಿ 5 ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಚುನಾವಣಾ ಆಯೋಗವು ಇವಿಎಂಗಳ ವಿಶ್ವಾಸಾರ್ಹತೆಯನ್ನು ಪುನರುಚ್ಚರಿಸಿದೆ.

Delhi Assembly elections on February 5 Results on February 8

ದೆಹಲಿ ಮಹಾ ಸಮರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಹೊರ ಬರಲಿದೆ.  ದೆಹಲಿಯಲ್ಲಿ ಬಿಜೆಪಿ, ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ.  ದೆಹಲಿಯಲ್ಲಿ ಆಡಳಿತಾರೂಢ ಎಎಪಿ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಆರೋಪ ಪ್ರತ್ಯರೋಪಗಳು ಏರ್ಪಟ್ಟಿರುವ ಬೆನ್ನಲೇ ಈಗ ಚುನಾವಣೆ ಘೋಷಣೆಯಾಗಿದ್ದು, ಪಕ್ಷಗಳ ನಡುವಣ ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚು ಮಾಡಿದೆ.

ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಚುನಾವಭಾ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ  2024 ರ ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಇವಿಎಂ ಬಗ್ಗೆ ಕೇಳಿ ಬಂದ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದು,  ಭಾರತದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ದೃಢತೆಯನ್ನು ಪುನರುಚ್ಚರಿಸಿದ್ದಾರೆ. ಎವಿಎಂಗಳಲ್ಲಿ ಯಾವುದೇ ಲೋಪದೋಷಗಳಿಲ್ಲ ಎಂದು ಅವರು ಮತ್ತೆ ಹೇಳಿದರು.  ಸುದ್ದಿಗೋಷ್ಠೀ ವೇಳೆ ಕೇಳಿ ಬಂದ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಸುತ್ತಲಿನ ವಿವಾದದ ಕುರಿತು ಮಾತನಾಡಿದ ಕುಮಾರ್ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳು ನೀಡಿದ ಉತ್ತರಗಳನ್ನು ಪುನರುಚ್ಚರಿಸಿದರು. ಗೌರವಾನ್ವಿತ ನ್ಯಾಯಾಲಯಗಳು ಈಗಾಗಲೇ ಹೇಳಿವೆ. ಎವಿಎಂಗಳನ್ನು ಏನೂ ಮಾಡಲಾಗುವುದಿಲ್ಲ, ಹ್ಯಾಕ್ ಮಾಡಲು ಆಗುವುದಿಲ್ಲ,  ಹಾಗೂ ಇವಿಎಂ ಹ್ಯಾಕ್ ಆಗಿದೆ ಎಂದು ಹೇಳುವುದಕ್ಕೇ ಯಾವುದೇ ಸಾಕ್ಷ್ಯಗಳಿಲ್ಲ, ಮತದಾನಕ್ಕೆ ಏಳರಿಂದ ಎಂಟು ದಿನಗಳ ಮೊದಲು ಇವಿಎಂಗಳನ್ನು ಕಾರ್ಯಗತಗೊಳಿಸಲಾಗುತ್ತದೆ, ಪ್ರತಿ ಹಂತದಲ್ಲೂ ಅಭ್ಯರ್ಥಿಗಳ ಏಜೆಂಟರಿಗೆ ಮಾಹಿತಿ ನೀಡಲಾಗುತ್ತದೆ, ಯಾವುದೇ ಅಕ್ರಮ ನಡೆಸುವುದು ಇದರಲ್ಲಿ ಅಸಾಧ್ಯ ಎಂದು ಕುಮಾರ್ ಸ್ಪಷ್ಟಪಡಿಸಿದ್ದಾರೆ.

 

Latest Videos
Follow Us:
Download App:
  • android
  • ios