ದೆಹಲಿಯಲ್ಲಿನ ಸೇವೆಗಳಿಗೆ ಸಂಬಂಧಿಸಿದ ಆಡಳಿತದಲ್ಲಿ ದೆಹಲಿ ಸರ್ಕಾರಕ್ಕೇ ಹೆಚ್ಚಿನ ಅಧಿಕಾರವಿದೆ ಎಂಬ ಮೇ 11ರಂದು ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದೆ.

ನವದೆಹಲಿ: ದೆಹಲಿಯಲ್ಲಿನ ಸೇವೆಗಳಿಗೆ ಸಂಬಂಧಿಸಿದ ಆಡಳಿತದಲ್ಲಿ ದೆಹಲಿ ಸರ್ಕಾರಕ್ಕೇ ಹೆಚ್ಚಿನ ಅಧಿಕಾರವಿದೆ ಎಂಬ ಮೇ 11ರಂದು ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದೆ. ಮೇ 11ರ ಕೋರ್ಚ್‌ನ ತೀರ್ಪಿನ ಹಿನ್ನೆಲೆಯಲ್ಲಿ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಶುಕ್ರವಾರವಷ್ಟೇ ಸುಗ್ರೀವಾಜ್ಞೆ ಹೊರಡಿಸಿದ್ದ ಕೇಂದ್ರ ಸರ್ಕಾರ, ಶನಿವಾರ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.

ಕೇಂದ್ರ ಸರ್ಕಾರದ ಪರವಾಗಿ ಅರ್ಜಿ ಸಲ್ಲಿಸಿರುವ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ‘ತೀರ್ಪು ಕೇವಲ ದಾಖಲೆಗಳನ್ನು ಆಧರಿಸಿ ನೀಡಿದ್ದಾಗಿಯೇ ಹೊರತೂ, ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದವರ ವಾದವನ್ನು ಪರಿಗಣಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಮೇ 11ರಂದು ತೀರ್ಪನ್ನು ಮರುಪರಿಶೀಲನೆ ಮಾಡಬೆಕು’ ಎಂದು ಮನವಿ ಮಾಡಿದ್ದಾರೆ. ಮೇ 11ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, ‘ದೆಹಲಿಯಲ್ಲಿನ ಸೇವೆಗಳಿಗೆ ಸಂಬಂಧಿಸಿದ ಆಡಳಿತದಲ್ಲಿ ದೆಹಲಿ ಸರ್ಕಾರಕ್ಕೇ ಅಧಿಕಾರವಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ ಹಾಗೂ ಭೂಮಿಗೆ ಸಂಬಂಧಿಸಿದ ಅಧಿಕಾರ ದೆಹಲಿ ಸರ್ಕಾರಕ್ಕಿಲ್ಲ’ ಎಂದು ಸ್ಪಷ್ಟಪಡಿಸಿತ್ತು.

ಸುಗ್ರೀವಾಜ್ಞೆ ಅಸಾಂವಿಧಾನಿಕ, ಸುಪ್ರೀಂಗೆ ದೂರು

ದೆಹಲಿ ಆಡಳಿತದ ಕುರಿತು ಕೇಂದ್ರ ಸರ್ಕಾರ ಮೇ.19 ರಂದು ಜಾರಿ ತಂದಿರುವ ಸುಗ್ರೀವಾಜ್ಞೆ ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ವಿರುದ್ಧವಾಗಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದ ಸುಗ್ರೀವಾಜ್ಞೆ: ಮತ್ತೆ ಸುಪ್ರೀಂ ಮೆಟ್ಟಿಲೇರಲಿರೋ ಕೇಜ್ರಿವಾಲ್‌

ಈ ಕುರಿತು ಹೇಳಿಕೆ ನೀಡಿರುವ ಕೇಜ್ರಿವಾಲ್‌ (Arvind kejriwal), ಕೇಂದ್ರ ಸರ್ಕಾರವು (Central govt) ಸುಪ್ರೀಂಕೋರ್ಟ್ (Supreme Court verdict) ನೀಡಿರುವ ತೀರ್ಪನ್ನು ತಿರುಚುವ ಕಾರ್ಯಕ್ಕೆ ಮುಂದಾಗಿದೆ. ಈ ಮೂಲಕ ನ್ಯಾಯಾಂಗ ನಿಂದನೆ ಮಾಡಿದೆ. ಸುಪ್ರೀಂಕೋರ್ಟ್ ವಿರುದ್ಧ ಕೇಂದ್ರ ಸರ್ಕಾರವು ಮುಖಾಮುಖಿಯಾಗಿ ಹೋರಾಟ ಆರಂಭಿಸಿದೆ. ನಾವು ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆ. ಈ ಮುಖಾಂತರ ಅಸಾಂವಿಧಾನಿಕವಾಗಿ ತೆಗೆದುಕೊಂಡ ನಿರ್ಧಾರದ ವಿರುದ್ಧ ಧ್ವನಿ ಎತ್ತಲಿದ್ದೇವೆ. ಕೇಂದ್ರದ ಬಿಜೆಪಿ ಸರ್ಕಾರವು ದೆಹಲಿಯಲ್ಲಿ ಒಳ್ಳೆ ಕೆಲಸಗಳಿಗೆ ಅಡ್ಡಗಾಲು ಹಾಕುತ್ತಿದೆ. ಹೀಗಾಗಿ ವಿಪಕ್ಷಗಳ ನಾಯಕರನ್ನು ಭೇಟಿ ಮಾಡಿ ಇದನ್ನು ರಾಜ್ಯಸಭೆಯಲ್ಲಿ ಅಂಗೀಕರಿಸದಂತೆ ಮನವಿ ಮಾಡುತ್ತೇವೆ ಹಾಗೂ ದೆಹಲಿಯಲ್ಲಿ ಬೃಹತ್‌ ರಾಲಿ ಮಾಡುತ್ತೇವೆ. ಮನೆಮನೆಗೂ ಹೋಗಿ ಇದನ್ನು ವಿವರಿಸುತ್ತೇವೆ’ ಎಂದರು ಕೇಜ್ರಿವಾಲ್‌ ಆಕ್ರೋಶ ಹೊರಹಾಕಿದರು.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಸೇವಾ ಕಾರ್ಯದರ್ಶಿಯನ್ನು ವಜಾ ಮಾಡಿದ ಕೇಜ್ರಿವಾಲ್‌!