ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಮತ್ತು ಭದ್ರತಾ ಕಾರಣಗಳಿಗಾಗಿ ದೆಹಲಿಗೆ ಆಗಮಿಸುವ ಎಲ್ಲ ಎಕ್ಸ್‌ಪ್ರೆಸ್ ರೈಲುಗಳನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ.
ದೆಹಲಿ (ಅ.9): ನಾಳೆ(ಅ.10) ರಂದು ಕಾಕ್ರೋಚ್ ಜನತಾ ಪಾರ್ಟಿ(CJP) ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆ ಭಾರೀ ಸಂಚಾರ ದಟ್ಟಣೆ ತಡೆಯಲು ದೆಹಲಿಗೆ ಬರುವ ಎಲ್ಲ ಎಲ್ಲ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದು ಮಾಡುವ ಮೂಲಕ ಭಾರತೀಯ ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ದೆಹಲಿ ಬರುವ ಎಲ್ಲ ಎಕ್ಸ್‌ಪ್ರೆಸ್ ರೈಲುಗಳು ರದ್ದು
ರೈಲ್ವೆ ಇಲಾಖೆಯ ಪ್ರಕಾರ ಅಕ್ಟೋಬರ್ 10, 2026 ರಂದು ಬೆಳಗಿನ ಜಾವ 4:00 ರಿಂದ ಮಧ್ಯಾಹ್ನ 2:00 ರವರೆಗೆ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಆಗಮಿಸುವ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಿದೆ. ಈ ಎರಡೂ ನಿಲ್ದಾಣಗಳ ಸುತ್ತಲೂ ಭಾರೀ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ. ಹೀಗಾಗಿ ನಾಳೆ ದೆಹಲಿಗೆ ತೆರಳಲಿರುವ ಸಾಮಾನ್ಯ ಪ್ರಯಾಣಿಕರು ಹೊರಡುವ ಮೊದಲು ತಮ್ಮ ರೈಲಿನ ಪ್ರಯಾಣದ ಬಗ್ಗೆ ಪರಿಶೀಲಿಸುವಂತೆ ಅಥವಾ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಸೂಚಿಸಿದೆ.
ನಾಳೆ ಜಂತರ್ ಮಂತರ್ ಪ್ರತಿಭಟನೆಗೆ ಕರೆಕೊಟ್ಟಿರುವ ಸಿಜೆಪಿ
ಅಕ್ಟೋಬರ್ 10 ರಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣ, ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ನಿಲ್ದಾಣ ತಲುಪಲು ಕಷ್ಟವಾಗಬಹುದು,
ದೆಹಲಿ ಪೊಲೀಸರಿಂದ ಸೂಚನೆ
ಕಳೆದ ಬಾರಿ ಸಿಜೆಪಿ ಪ್ರತಿಭಟನೆಯಿಂದ ದೇಶಾದ್ಯಂತ ಲಕ್ಷಾಂತರ ಯುವ ಸಮೂಹ ದೆಹಲಿಗೆ ಬಂದ ಪರಿಣಾಮ ಎಲ್ಲ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದಲ್ಲದೆ ಮೆಟ್ರೋ ನಿಲ್ದಾಣದಲ್ಲಿ ಪುಂಡಾಟ ಮರೆದಿದ್ದ ವಿಡಿಯೋಗಳು ವೈರಲ್ ಆಗಿದ್ದವು. ಈ ಬಾರಿ ಅಂತಹ ಯಾವುದೇ ದುರ್ಘಟನೆಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ರೈಲ್ವೆ ಇಲಾಖೆ ಪೊಲೀಸರ ಪ್ರಸ್ತಾವನೆಗೆ ಸ್ಪಂದಿಸಿ ನಿರ್ಧಾರ ಕೈಗೊಂಡಿದೆ.
ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಇಂದು ರಾತ್ರಿ 9 ಗಂಟೆಯಿಂದ 57 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ. ಪೊಲೀಸರ ಪ್ರಕಾರ ಈ ಸಮಯದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಇಂಟರ್ಚೇಂಜ್ ಸೌಲಭ್ಯಗಳು ಮುಂದುವರಿಯಬಹುದು. ಆದಾಗ್ಯೂ, ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚುವ ಅಂತಿಮ ನಿರ್ಧಾರವನ್ನು DMRC ತೆಗೆದುಕೊಳ್ಳುತ್ತದೆ.
ಅಕ್ಟೋಬರ್ 10 ನಾಳೆ ರೈಲು ಸಂಚಾರ ವ್ಯತ್ಯಯ
ರೈಲ್ವೆ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಇಂದಿನಿಂದ(ಅ.9) ಮಧ್ಯಾಹ್ನ 2 ಗಂಟೆಯ ನಂತರ ತಮ್ಮ ಮೂಲ ನಿಲ್ದಾಣಗಳಿಂದ ಹೊರಟು ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ಗಂಟೆಯ ನಡುವೆ ನವದೆಹಲಿ ಅಥವಾ ಹಜರತ್ ನಿಜಾಮುದ್ದೀನ್‌ಗೆ ಆಗಮಿಸುವ ಎಲ್ಲ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗುವುದು. ಸಂಚಾರ ದಟ್ಟಣೆ ಮತ್ತು ಭದ್ರತಾ ಕಾರಣಗಳಿಗಾಗಿ ರೈಲ್ವೆ ಇಲಾಖೆ ಈ ಕ್ರಮ ಕೈಗೊಂಡಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಿದೆ.


