ತಿಹಾರ್ ಜೈಲಿನಲ್ಲಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ಸಿಬಿಐ ವಶಕ್ಕೆ

ಬುಧವಾರ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಬುಧವಾರ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. 

Delhi CM Arvind Kejriwal arrested by CBI from Tihar Jail mrq

ನವದೆಹಲಿ: ಕೇಂದ್ರೀಯ ತನಿಖಾ ದಳ ಸೋಮವಾರ ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಬುಧವಾರ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.  ಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಮಂಗಳವಾರ ದೆಹಲಿ ಹೈಕೋರ್ಟ್‌ ರದ್ದು ಮಾಡಿತ್ತು.

"ಟ್ರಯಲ್ ಕೋರ್ಟ್ ಯಾವುದೇ ತೀರ್ಮಾನವನ್ನು ನೀಡಬಾರದು, ಇದು ಹೈಕೋರ್ಟ್‌ ತೀರ್ಮಾನಕ್ಕೆ ವಿರುದ್ಧವಾಗಿದೆ. ದಾಖಲೆಗಳು ಮತ್ತು ವಾದಗಳನ್ನು ಸರಿಯಾಗಿ ಪರಿಶೀಲನೆ ಮಾಡಲಾಗಿಲ್ಲ," ಎಂದು ಪೀಠ ಹೇಳಿದೆ. "ಒಮ್ಮೆ ಅವರ ಬಂಧನವನ್ನು ಪ್ರಶ್ನಿಸುವ ಅವರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದರೆ, ಕಾನೂನು ಉಲ್ಲಂಘಿಸಿ ಅವರ ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಹೇಳಲಾಗುವುದಿಲ್ಲ" ಎಂದು ಅದು ಹೇಳಿದೆ, ನ್ಯಾಯಾಲಯವು ಕೇಜ್ರಿವಾಲ್ ಮತ್ತು ಇಡಿ ಪರ ವಕೀಲರ ವಾದಗಳನ್ನು ಪರಿಗಣಿಸಿದೆ.

Latest Videos
Follow Us:
Download App:
  • android
  • ios