ನವದೆಹಲಿ(ಫೆ.11): ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಇದುವರೆಗೂ ಬಂದ ಅಂಕಿ ಅಂಶಗಳ ಪ್ರಕಾರ ಆಪ್ 58, ಬಿಜೆಪಿ 12, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಇನ್ನು ಹೀನಾಯ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸುಭಾಷ್ ಛೋಪ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸುಭಾಷ್ ಛೋಪ್ರಾ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ್ನು ಕಂಗಾಲು ಮಾಡಿದ ದೆಹಲಿ: ಕೈ ಸೋಲಿಗೆ ಕಾರಣಗಳಿವೆ ಇಲ್ಲಿ!

ದೆಹಲಿ ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತುಕೊಳ್ಳುವುದಾಗಿ ಹೇಳಿರುವ ಸುಭಾಷ್ ಛೋಪ್ರಾ, ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಹಾಕಿರುವ ಆಪ್’ಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.