ದೆಹಲಿ(ಜು.28): ಕೊರೋನಾ ವೈರಸ್ ಕಾರಣ ದೇಶದ ಅರ್ಥವ್ಯವಸ್ಥೆ ಬುಡಮೇಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರೂ ಹಲವು ಕ್ಷೇತ್ರಗಳಿಗೆ ಅನ್ವಯಿಸಿಲ್ಲ. ಅನ್‌ಲಾಕ್ 2.0 ಜುಲೈ 31ಕ್ಕೆ ಅಂತ್ಯವಾಗಲಿದೆ. ಆದರೂ ಸಿನಿಮಾ, ಜಿಮ್, ಮೆಟ್ರೋ ರೈಲು, ಶಾಲೆ, ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡಿಲ್ಲ. ಆದರೆ ದೆಹಲಿ ಸರ್ಕಾರ ಇದೀಗ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡಿದೆ. ಈ ಮೂಲಕ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಅಮೆರಿಕದಲ್ಲಿ 30,000 ಜನರ ಮೇಲೆ ಕೋವಿಡ್‌ ಲಸಿಕೆ: ಇದು ಅಂತಿಮ ಹಂತದ ಪ್ರಯೋಗ!..

ಆಹಾರ ತಿನಿಸುಗಳ ವ್ಯಾಪಾರ ಸೇರಿದಂತೆ ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ ಹೇರಿದ ಕಾರಣ ಹಲವು ಕುಟುಂಬಗಳು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹಲವು ಕ್ಷೇತ್ರಗಳಿಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ದೆಹಲಿ ಸರ್ಕಾರ ಬೀದಿ ಬದಿ ವ್ಯಾಪಾರಿಗಳೂ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಿದೆ. 

ಬೆಂಗಳೂರಿನ 87 ವಾರ್ಡಲ್ಲಿ 100ಕ್ಕೂ ಹೆಚ್ಚು ಕೇಸ್‌, ಸೋಂಕಿತರ ಸಂಖ್ಯೆ 47000 ಗಡಿಗೆ.

ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಕೊರೋನಾ ವೈರಸ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸಿದರೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗುವುದು ಎಂದು ದೆಹಲಿ ಸರ್ಕಾರ ಹೇಳಿದೆ.

ದೆಹಲಿಯಲ್ಲಿ ಸಿನಿಮಾ, ಜಿಮ್ ಸೇರಿದಂತೆ ಇತರ ನಿರ್ಬಂಧ ಮುಂದುವರಿಸಿರುವ ವಲಯಗಳ ವರ್ತಕರು ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮನವಿ ಮಾಡಿದ್ದಾರೆ. ಇದೀಗ ದೆಹಲಿ ಸರ್ಕಾರ, ಕೇಂದ್ರ ಸರ್ಕಾರ ಅನ್‌ಲಾಕ್ 3.0 ಮಾರ್ಗಸೂಚಿಗಾಗಿ ಕಾಯುತ್ತಿದೆ.