Asianet Suvarna News Asianet Suvarna News

ಭಾರತಕ್ಕೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್!

* ದೇಶಕ್ಕೊಂದು ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಆರೋಗ್ಯ ಸಚಿವ

* ದೈನಂದಿನ ಪ್ರಕರಣಗಳ ಸಂಖ್ಯೆ ತೀರಾ ಇಳಿಕೆ

* ಹತ್ತು ರಾಜ್ಯಗಳಲ್ಲಿ ಶೇ 83ರಷ್ಟು ಸಕ್ರಿಯ ಪ್ರಕರಣ

Delhi Haryana among 7 states where COVID 19 cases are less than 1000 Health Minister pod
Author
Bangalore, First Published Jun 7, 2021, 5:20 PM IST

ನವದೆಹಲಿ(ಜೂ.07): ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸೋಮವಾರ ಮಾತನಾಡುತ್ತಾ ದೆಹಲಿ, ಹರ್ಯಾಣ ಸೇರಿ ಒಟ್ಟು ಏಳು ರಾಜ್ಯಗಳಲ್ಲಿ ಒಂದು ಸಾವಿರಕ್ಕಿಂತ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಉತ್ತರಾಖಂಡ್ ಹಾಗೂ ಜಾರ್ಖಂಡ್ ಹೆಸರು ಕೂಡಾ ಇದೆ.

ದೇಶದಲ್ಲಿ ಕೊರೋನಾ ಪರಿಸ್ಥಿತಿ ವಿಚಾರವಾಗಿ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ದೇಶದಲ್ಲಿಂದು 14.01 ಲಕ್ಷ ಕೊರೋನಾ ಸಕ್ರಿಯ ಪ್ರಕರಣಗಳಿವೆ ಎಂದಿದ್ದಾರೆ.

ಚೀನಾ ಲ್ಯಾಬ್‌ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!

ಹತ್ತು ರಾಜ್ಯಗಳಲ್ಲಿ ಶೇ 83ರಷ್ಟು ಸಕ್ರಿಯ ಪ್ರಕರಣ

ದೇಶದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ. 83ರಷ್ಟು ಕೇವಲ ಹತ್ತು ರಾಜ್ಯಗಳಲ್ಲಿವೆ. ಉಳಿದ ಶೇ. 17ರಷ್ಟು ಪ್ರಕರಣಗಳು 26 ರಾಜ್ಯಗಳಲ್ಲಿವೆ ಎಂದಿದ್ದಾರೆ. ಈ ವೇಳೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾದಾಗ ಎಲ್ಲಾ ರೀತಿಯಲ್ಲಿ ಸಜ್ಜಾಗಿರಲು ಬೇಕಾದ ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚಿಸಿದ್ದಾರೆ. 

ಈ ರಾಜ್ಯಗಳಲ್ಲಿ 2 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು

ಜಮ್ಮು ಕಾಶ್ಮೀರ, ಪಂಜಾಬ್, ಬಿಹಾರ, ಛತ್ತೀಸ್‌ಗಢ ಹಾಗೂ ಉತ್ತರ ಪ್ರದೇಶದಲ್ಲಿ ದಾಖಲಾಗುತ್ತಿರುವ ದೈನಂದಿನ ಪ್ರಕರಣಗಳು ಎರಡು ಸಾವಿರಕ್ಕಿಂತ ಕಡಿಮೆ ಇದೆ ಎಂದೂ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios