ನವದೆಹಲಿಯ ಅಮರ್ ಕಾಲೋನಿಯಲ್ಲಿ ಭಾರತೀಯ ಕಂದಾಯ ಸೇವಾ ಅಧಿಕಾರಿಯ 22 ವರ್ಷದ ಪುತ್ರಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಲೈಂಗಿಕ ದೌರ್ಜನ್ಯದ ನಂತರ ಮೊಬೈಲ್ ಚಾರ್ಜರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಮನೆಗೆಲಸದಾತನ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಐಆರ್‌ಎಸ್ ಅಧಿಕಾರಿಯ ಪುತ್ರಿಯ ಭೀಕರ ಹತ್ಯೆ

ನವದೆಹಲಿ: ಮನೆಯಲ್ಲಿಯೇ ಭಾರತೀಯ ಕಂದಾಯ ಸೇವೆಯ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೊಬ್ಬರ ಕೊಲೆಯಾಗಿದ್ದು ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಆಗ್ನೇಯ ದೆಹಲಿಯ ಅಮರ್ ಕಾಲೋನಿ ಪ್ರದೇಶದಲ್ಲಿಇಂದು ಬುಧವಾರ ಈ ಭಯಾನಕ ಘಟನೆ ನಡೆದಿದೆ. ಈ ಕೃತ್ಯದಲ್ಲಿ 19 ವರ್ಷದ ಮನೆಕೆಲಸದ ವ್ಯಕ್ತಿಯ ಕೈವಾಡ ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆ ಆತನನ್ನು ಕೆಲಸದಿಂದ ತೆಗೆದು ಹಾಕುವ ಮೊದಲು ಅಧಿಕಾರಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಘಟನೆಯ ಬಳಿಕ ಆತ ಪರಾರಿಯಾಗಿರುವುದರಿಂದ ಪೊಲೀಸರಿಗೆ ಈಗ ಆತನ ಮೇಲೆ ಅನುಮಾನ ಮೂಡಿದೆ.

Add Asianetnews Kannada as a Preferred SourcegooglePreferred

ಕೆಲಸದವನ ಮೇಲೆ ಅನುಮಾನ

ಪೊಲೀಸರ ಪ್ರಕಾರ ಸಂತ್ರಸ್ತ ಮಹಿಳೆ ಭಾರತೀಯ ಕಂದಾಯ ಸೇವೆಯ ಅಧಿಕಾರಿಯ ಪುತ್ರಿಯಾಗಿದ್ದು, ಆಕೆ ಅನುಮಾನಾಸ್ಪದ ಸ್ಥಿತಿಯಲ್ಲಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಘಟನೆಯ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನಂತರ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ವೇಳೆ 22 ವರ್ಷದ ಆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು ಎಂದು ತಿಳಿದು ಬಂದಿದೆ. ಮನೆಗೆ ಬಲವಂತವಾಗಿ ಪ್ರವೇಶಿಸಿದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.

ತಿಂಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು:

ಒಂದು ತಿಂಗಳ ಹಿಂದೆ ಕೆಲಸದಿಂದ ತೆಗೆದು ಹಾಕಲ್ಪಟ್ಟ ಆ ಆರೋಪಿ ಮನೆಕೆಲಸದಾತ ನಿನ್ನೆ ರಾತ್ರಿ ದೆಹಲಿಗೆ ಬಂದಿರುವ ಬಗ್ಗೆ ಮಾಹಿತಿ ಇದೆ. ಆರೋಪಿ ನಕಲಿ ಕೀ ಬಳಸಿ ಕೃತ್ಯವೆಗಿರುವ ಶಂಕೆ ವ್ಯಕ್ತವಾಗಿದೆ. ಈಗ ತನಿಖೆಗಿಳಿದಿರುವ ಪೊಲೀಸರು ಆರೋಪಿಯ ಬಂಧಿಸಲು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಬೇಡಿಕೆ: ದಾಖಲೆ ಬೆಲೆಗೆ ಕೇಳಿದ ಉದ್ಯಮಿ