Asianet Suvarna News Asianet Suvarna News

Delhi LG Anil Baijal ಸಿಎಂ ಅರವಿಂದ್ ಕೇಜ್ರಿವಾಲ್ ನಿದ್ದೆಗೆಡಿಸಿದ್ದ ದೆಹಲಿ ಲೆ.ಗವರ್ನರ್ ಅನಿಲ್ ರಾಜೀನಾಮೆ!

  • ವೈಯುಕ್ತಿಕ ಕಾರಣ ನೀಡಿ ರಾಷ್ಟ್ರಪತಿಗೆ ರಾಜೀನಾಮೆ ಪತ್ರ ರವಾನೆ
  • 2016ರಲ್ಲಿ ದೆಹಲಿ ಗರ್ವನರ್ ಆಗಿ ಅಧಿಕಾರ ಸ್ವೀಕಾರ
  • ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆ ಗುದ್ದಾಟದಿಂದ ಸುದ್ದಿ
Delhi Lieutenant Governor Anil Baijal resigned sent his resignation to President Kovind ckm
Author
Bengaluru, First Published May 18, 2022, 5:37 PM IST

ನವದೆಹಲಿ(ಮೇ.18): ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆ ಸದಾ ಗುದ್ದಾಟದಿಂದ ಸುದ್ದಿಯಾಗುತ್ತಿದ್ದ ದೆಹೆಲಿ ಲೆಫ್ಟಿನೆಂಟ್ ಗರ್ವನರ್ ಅನಿಲ್ ಬೈಜಾಲ್ ದಿಢೀರ್ ರಾಜೀನಾಮೆ ನೀಡಿದ್ದಾರೆ. 

ವೈಯುಕ್ತಿಕ ಕಾರಣ ನೀಡಿ ಅನಿಲ್ ಬೈಜಾಲ್ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಸಲ್ಲಿಸಿದ್ದಾರೆ 2016ರಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅನಿಲ್ ಬೈಜಾಲ್ ಅಧಿಕಾರ ಸ್ವೀಕರಿಸಿದ್ದರು.ಇದೀಗ ದಿಢೀರ್ ರಾಜೀನಾಮೆ ನೀಡಿ ಸಂಚಲನ ಮೂಡಿಸಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮುಸುಕಿನ ಗುದ್ದಾಟ ಹಲವು ಭಾರಿ ಸುದ್ದಿಯಾಗಿತ್ತು. ಇದೀಗ ವೈಯುಕ್ತಿಕ ಕಾರಣ ನೀಡಿ ಬೈಜಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಜೀಬ್ ಜಂಗ್ 2016ರಲ್ಲಿ ದಿಢೀರ್ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರ್ಕಾರ ಅನಿಲ್ ಬೈಜಾಲ್ ಅವರನ್ನು ನೇಮಕ ಮಾಡಿತ್ತು. ಇದೀದ ಅನಿಲ್ ಬೈಜಾಲ್ ಕೂಡ ದಿಢೀರ್ ರಾಜೀನಾಮೆ ನೀಡಿದ್ದಾರೆ.

ದೆಹಲಿಗೆ ಅನಿಲ್ ಬೈಜಾಲ್ ನೂತನ ಲೆಫ್ಟಿನೆಂಟ್ ಗವರ್ನರ್

ಡಿಡಿಎ ಉಪಾಧ್ಯಕ್ಷರಾಗಿ, ಪ್ರಸಾರ ಭಾರತೀ, ಇಂಡಿಯನ್ ಏರ್‌ಲೈನ್ಸ್ ಸೇರಿದಂತೆ ಹಲವು ಸಾರ್ವಜನಿಕ ವಲಯ ಕಂಪನಿಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಅನಿಲ್ ಬೈಜಾಲ್ ನಗರಾಭಿವೃದ್ಧಿ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. 2006ರಲ್ಲಿ ಸೇವೆಯಿಂದ ನಿವೃತ್ತರಾದ ಅನಿಲ್ ಬೈಜಾಲ್ ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಮೂಲಭೂತ ಸೌಕರ್ಯ ಸುಧಾರಣೆ ಕಾರ್ಯದಲ್ಲೂ ಮಹತ್ತರ ಕೊಡುಗೆ ನೀಡಿದ್ದಾರೆ. 

 

ದಿಲ್ಲಿ ಗೌರ್ನಮೆಂಟ್‌ ಅಂದರೆ ಇನ್ನು ‘ಲೆ. ಗವರ್ನರ್‌’
ದಿಲ್ಲಿ ಸರ್ಕಾರ ಎಂದರೆ ಉಪರಾಜ್ಯಪಾಲರು’ ಎಂಬ ವಿವಾದಿತ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿಕೊಂಡಿದ್ದ ಕೇಂದ್ರ ಸರ್ಕಾರ, ಈಗ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಚುನಾಯಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬದಲು ಇನ್ನು ಮುಂದೆ ಉಪರಾಜ್ಯಪಾಲ ಅನಿಲ್‌ ಬೈಜಲ್‌ ಅವರೇ ದಿಲ್ಲಿ ಸರ್ಕಾರದ ಮುಖ್ಯಸ್ಥನ ರೀತಿ ಕೆಲಸ ಮಾಡಲಿದ್ದಾರೆ.

ಕಳೆದ ಸಂಸತ್‌ ಅಧಿವೇಶನದಲ್ಲಿ ‘ದಿಲ್ಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ-2021’ ಅಂಗೀಕಾರವಾಗಿತ್ತು. ಇದಕ್ಕೆ ರಾಷ್ಟ್ರಪತಿಗಳ ಅಂಕಿತ ಕೂಡ ಬಿದ್ದಿತ್ತು. ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆ ಪ್ರಕಟಿಸಿ, ತಿದ್ದುಪಡಿಯನ್ನು ಜಾರಿಗೆ ತಂದಿದೆ.

ದಿಲ್ಲಿ ಕೇಂದ್ರಾಡಳಿತ ಪ್ರದೇಶವಾಗಿದ್ದು ಪೊಲೀಸರು ಕೇಂದ್ರ ಸರ್ಕಾರದ ಅಡಿಯಲ್ಲೇ ಕಾರ್ಯನಿರ್ವಹಿಸುತ್ತಾರೆ. ಆದರೆ, ಆರೋಗ್ಯ, ಶಿಕ್ಷಣ, ಕೃಷಿ, ಅರಣ್ಯ, ಸಾರಿಗೆ- ಈ ಮೊದಲಾದ ವಿಷಯಗಳು ದಿಲ್ಲಿ ಸರ್ಕಾರದ ಅಧೀನಕ್ಕೆ ಬರುತ್ತವೆ.

ಈಗ ‘ರಾಜ್ಯಪಾಲರೇ ಆಡಳಿತದ ಮುಖ್ಯಸ್ಥರು’ ಎಂಬ ಕಾನೂನು ಜಾರಿಗೆ ಬಂದಿರುವ ಕಾರಣ, ರಾಜ್ಯ ಸರ್ಕಾರ (ಕೇಜ್ರಿವಾಲ್‌ ಸರ್ಕಾರ) ತನ್ನ ವ್ಯಾಪ್ತಿಯಲ್ಲಿ ಬರುವ ಯಾವುದೇ ವಿಷಯದ ನಿರ್ಣಯ ಕೈಗೊಳ್ಳಬೇಕಾದರೂ ಇನ್ನು ಉಪರಾಜ್ಯಪಾಲರ ಅನುಮೋದನೆ ಪಡೆಯಬೇಕಾಗುತ್ತದೆ.

ಈಗಾಗಲೇ ಕೇಜ್ರಿವಾಲ್‌ ಸರ್ಕಾರ, ಕೇಂದ್ರ ಸರ್ಕಾರದ ಈ ನಡೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದು, ‘ಎಲ್ಲ ರಾಜ್ಯಪಾಲರದ್ದೇ ಅಧಿಕಾರ ಎಂದರೆ ಚುನಾಯಿತ ಸರ್ಕಾರವೇಕೆ ಬೇಕು?’ ಎಂದಿದೆ. ಅದರಲ್ಲೂ ಕೊರೋನಾದಂಥ ಸೂಕ್ಷ್ಮ ವಿಷಯವನ್ನು ಕೇಜ್ರಿವಾಲ್‌ ಸರ್ಕಾರ ನಿಭಾಯಿಸುತ್ತಿರುವಾಗ ಇಂಥ ನಿರ್ಣಯ ಅಗತ್ಯವಿತ್ತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

 

Follow Us:
Download App:
  • android
  • ios