ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಯನ್ನು ಮಾರ್ಚ್ 10 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿದೆ. ಇತ್ತ ಸಿಬಿಐ, ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಿದೆ.

ನವದೆಹಲಿ(ಮಾ.04): ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಆಮ್ ಆದ್ಮಿ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಂಧನದ ಬೆನ್ನಲ್ಲೇ ಜಾಮೀನಿಗಾಗು ಸುಪ್ರೀಂ ಕೋರ್ಟ್ ಕದ ತಟ್ಟಿದ ಸಿಸೋಡಿಯಾಗೆ ತೀವ್ರ ಹಿನ್ನಡೆಯಾಗಿತ್ತು. ಇದಾದ ಬಳಿಕ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಸೋಡಿಯಾ ಇದೀಗ ತಿಹಾರ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಾರ್ಚ್ 10ಕ್ಕೆ ಮುಂದೂಡಿದೆ. ಇತ್ತ ಸಿಬಿಐ ಕಸ್ಡಡಿ ಅವಧಿ ಇಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮತ್ತೆ ಕೋರ್ಟ್‌ಗೆ ಹಾಜರುಪಡಿಸಿ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಸ್ತರಿಸಲು ಮನವಿ ಮಾಡಿದೆ.ರೋಸ್ ಅವೆನ್ಯೂ ನ್ಯಾಯಾಲಯ ಇದೀಗ 2 ದಿನಗಳ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಕಸ್ಡಡಿಗೆ ನೀಡಿದೆ.

ಅಬಕಾರಿ ನೀತಿಯಲ್ಲಿನ ಅಕ್ರಮ ಕುರಿತು ಸಿಬಿಐ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿಗಳು ಕಳೆದ ಭಾನುವಾರ ಮನೀಶ್ ಸಿಸೋಡಿಯಾ ಬಂಧಿಸಿದ್ದರು ಭಾನುವರ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಸಿಸೋಡಿಯಾ ಸಮಪರ್ಕ ಉತ್ತರ ನೀಡಿಲು ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ಸಿಸೋಡಿಯಾ ಬಂಧನವಾಗಿತ್ತು. ಬಳಿಕ ದೆಹಲಿ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಸಿಸೋಡಿಯಾ ವಾದಗಳಿಗೆ ಕೋರ್ಟ್‌ನಲ್ಲಿ ಮನ್ನಣೆ ಸಿಗಲಿಲ್ಲ. ಹೀಗಾಗಿ5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು.

ಆಪ್‌ ಸೇನಾನಿಗಳು ಜೈಲಿಗೆ: ಉಡುಗಿದ ಸೇನೆಯ ಮಹಾದಂಡನಾಯಕನ ಜಂಘಾಬಲ..!

ಈ ಬೆಳವಣಿಗೆ ಬೆನ್ನಲ್ಲೇ ಮನೀಶ್ ಸಿಸೋಡಿಯಾ ಜಾಮೀನಿಗಾಗಿ ಸುಪ್ರೀ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸಿಸೋಡಿಯಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತರಿಸ್ಕರಿಸಿತು. ಹೈಕೋರ್ಟ್‌ನಲ್ಲಿ ಮನವಿ ಮಾಡುವಂತೆ ಸೂಚಿಸಿತ್ತು. ಇದರಂತೆ ದೆಹಲಿ ಹೈಕೋರ್ಟ್‌ನಲ್ಲಿ ಸಿಸೋಡಿಯಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಸಿಸೋಡಿಯಾ ಜಾಮೀನು ಅರ್ಜಿಯನ್ನು ಮಾರ್ಚ್ 10 ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. 

ಇತ್ತ ರೋಸ್ ಅವೆನ್ಯೂ ಕೋರ್ಟ್‌ಗೆ ಭಾರಿ ಬದ್ರತೆಯೊಂದಿಗೆ ಮನೀಶ್ ಸಿಸೋಡಿಯಾರನ್ನು ಹಾಜರುಪಡಿಸಲಾಗಿದೆ. ಈಗಾಗಲೇ ಸಿಬಿಐ ಅಧಿಕಾರಿಗಳು ಮತ್ತೆ 3 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಇದೀಗ ಮನೀಶ್ ಸಿಸೋಡಿಯಾ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ವಾದ ವಿವಾದ ಆಲಿಸಿದ ರೋಸ್ ಅವೆನ್ಯೂ ನ್ಯಾಯಾಲಯ 2 ದಿನಗಳ ಕಾಲ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.

ಮನೀಶ್‌ ಬಿಜೆಪಿ ಸೇರಿದರೆ ನಾಳೆಯೇ ಕೇಸು ರದ್ದು: ಕೇಜ್ರಿವಾಲ್‌ ವ್ಯಂಗ್ಯ
ಸತ್ಯೇಂದ್ರ ಜೈನ್‌ ಹಗೂ ಮನೀಶ ಸಿಸೋಡಿಯಾ ಅವರನ್ನು ಬಂಧಿಸಿದ ಹಿಂದೆ ಬಿಜೆಪಿ ಷಡ್ಯಂತ್ರವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿ ಉತ್ತಮ ಕೆಲಸಗಳನ್ನು ನಿಲ್ಲಿಸುವ ಉದ್ದೇಶ ಹೊಂದಿದ್ದಾರೆ. ಅದರ ಫಲವೇ ಈ ಇಬ್ಬರ ಬಂಧನ ಎಂದು ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ನೇತಾರ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮನೀಶ್‌ ಹಾಗೂ ಸತ್ಯೇಂದ್ರ ಇಂದೇ ಬಿಜೆಪಿ ಸೇರಿದರೆ ನಾಳೆಯೇ ಅವರ ಮೇಲಿನ ಕೇಸುಗಳೆಲ್ಲ ರದ್ದುಗೊಳ್ಳುತ್ತವೆ’ ಎಂದು ಬಿಜೆಪಿಗೆ ಚಾಟಿ ಬೀಸಿದರು.

ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿ ದೇಶಾದ್ಯಂತ ಆಪ್ ಪ್ರತಿಭಟನೆ!

‘ಆಪ್‌ ಬಿರುಗಾಳಿ ಇದ್ದಂತೆ. ಇದಕ್ಕೆಲ್ಲ ಹೆದರಲ್ಲ. ಇನ್ನು ಸಚಿವರಾಗಲಿರುವ ಸೌರಭ್‌ ಭಾರದ್ವಾಜ್‌ ಹಾಗೂ ಅತಿಶಿ ಅವರು ಮನೀಶ್‌ ಹಾಗೂ ಸತ್ಯೇಂದ್ರರ ಒಳ್ಳೇ ಕೆಲಸ ಮುಂದುವರಿಸಲಿದ್ದಾರೆ’ ಎಂದರು.