ನವದೆಹಲಿ, (ಜೂನ್.26): ಕೊರೋನಾ ವೈರಸ್‌ಗೆ ಚಿಕಿತ್ಸೆಗೊಳಗಾಗಿದ್ದ  ನವದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಚೇತರಿಸಿಕೊಂಡಿದ್ದಾರೆ.

55 ವರ್ಷದ ಸಚಿವ ಸತ್ಯೇಂದ್ರ ಜೈನ್‌ ಕೊರೋನಾ ವರದಿ ನೆಗೆಟಿವ್‌ ಬಂದಿದ್ದು, ಇಂದು (ಶುಕ್ರವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.

ದೆಹಲಿ ಆರೋಗ್ಯ ಸಚಿವರಿಗೂ ಕೊರೋನಾ

ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಜೂನ್ 16 ರಿಂದ ಸತ್ಯೇಂದ್ರ ಜೈನ್‌ ಚಿಕಿತ್ಸೆಗೆ ಒಳಗಾಗಿದ್ದರು. ಮೊದಲಿಗೆ ಅವರನ್ನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಆಕ್ಸಿಜನ್‌ ಮಟ್ಟ ಏಕಾಏಕಿ ಕುಸಿದಿತ್ತು. ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು.

ಬಳಿಕ ಅಲ್ಲಿಂದ ಅವರನ್ನು ಸಾಕೇತ್‌ನಲ್ಲಿರುವ ಮಾಕ್ಸ್‌ ಆಸ್ಪತ್ರೆಗೆ ಶಿಫ್ಟ್ ಮಾಡಿ, ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯ ಚೇತರಿಸಿಕೊಂಡಿದ್ದರು.