ನವದೆಹಲಿ(ಮೇ.27): ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಲು ಕಾರಣವಾಗಿದೆ ಎನ್ನಲಾದ ದಿಲ್ಲಿಯ ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿದೇಶಗಳ 83 ತಬ್ಲೀಘಿಗಳ ವಿರುದ್ಧ ಇಲ್ಲಿನ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ.

ತಬ್ಲೀಘಿಗಳ ಕ್ವಾರಂಟೈನ್: ಡೆಲ್ಲಿ ಸರ್ಕಾರ ಮತ್ತು ಕೇಂದ್ರದ ನಡುವೆ ತಿಕ್ಕಾಟ

ಪ್ರವಾಸದ ವೀಸಾದಡಿ ಭಾರತಕ್ಕೆ ಆಗಮಿಸಿದ ಇವರು ಅಕ್ರಮವಾಗಿ ಜಮಾತ್‌ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಕೊರೋನಾ ತಡೆಗೆ ದೇಶಾದ್ಯಂತ ಹೇರಲಾಗಿದ್ದ ಲಾಕ್‌ಡೌನ್‌ ನಿಯಮಾವಳಿ, ಸರ್ಕಾರದ ಮಾರ್ಗಸೂಚಿಗಳು, ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಅಕ್ರಮ ಮಿಷನರಿ ಚಟವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು chargesheetನಲ್ಲಿ ಉಲ್ಲೇಖಿಸಲಾಗಿದೆ.

ನೆರೆಯ ಆಪ್ಘಾನಿಸ್ತಾನ ಸೇರಿದಂತೆ ಒಟ್ಟು 20 ರಾಷ್ಟ್ರಗಳ 82 ಪ್ರಜೆಗಳ ವಿರುದ್ಧ 20 chargesheetಗಳನ್ನು ಸಲ್ಲಿಸಲಾಗಿದೆ.