‘ಆಪ್’ ಕಾ ದಿಲ್ಲಿ: ಕೇಜ್ರಿ ಕುಳಿತರು ಮತ್ತೆ ಗದ್ದುಗೆಯಲ್ಲಿ!

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಅಂತ್ಯ| ಮತ್ತೆ ಅಧಿಕಾರ ಪಡೆದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್| ಒಟ್ಟು 63 ಕ್ಷೇತ್ರಗಳಲ್ಲಿ ಜಯಗಳಿಸಿದ ಆಮ್ ಆದ್ಮಿ ಪಕ್ಷ| ಕೇವಲ 07 ಕ್ಷೇತ್ರಗಳಿಗೆ ತೃಪ್ತಿ ಪಡೆದುಕೊಂಡ ಬಿಜೆಪಿ| ದೆಹಲಿಯಲ್ಲಿ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್| ದೆಹಲಿ ಜನತೆಗೆ ಧನ್ಯವಾದ ಅರ್ಪಿಸಿದ ಅರವಿಂದ್ ಕೇಜ್ರಿವಾಲ್| ಗೆಲುವನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ ಕೇಜ್ರಿ| ಮತದಾರನ ನಿರ್ಣಯಕ್ಕೆ ತಲೆ ಬಾಗುವುದಾಗಿ ಹೇಳಿದ ಬಿಜೆಪಿ| ದೆಹಲಿ ಚುನಾವಣಾ ಫಲಿತಾಂಶಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಏನು?|

Delhi Voted For AAP Again BJP Gets Better Numbers In Delhi Election 2020

ನವದೆಹಲಿ(ಫೆ.11): ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.

ಚುನಾವಣಾ ಆಯೋಗ ದೆಹಲಿಯ 70 ಕ್ಷೇತ್ರಗಳ ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದ್ದು, ಆಡಳಿತಾರೂಢ ಆಪ್ 63 , ಬಿಜೆಪಿ 07, ಹಾಗೂ ಕಾಂಗ್ರೆಸ್ ಶೂನ್ಯ ಕ್ಷೇತ್ರಗಳಲ್ಲಿ ಜಯ ದಾಖಲಿಸಿವೆ.

ಆಪ್‌ಗೆ ಬಹುಮತ: ವಿಧಾನಸಭೆ ವಿಸರ್ಜಿಸಿದ ಲೆ. ಗವರ್ನರ್!

ಈ ಮೂಲಕ ಆಪ್ ಮತ್ತೆ ಅಧಿಕಾರ ಪಡೆದಿದ್ದು, ಬಿಜೆಪಿ ಪ್ರಮುಖ ಪ್ರತಿಪಕ್ಷವಾಗಿ ಹೊರ ಹೊಮ್ಮಿದೆ. ಆದರೆ ಕಾಂಗ್ರೆಸ್ ಸ್ಥಾನ ಗಳಿಸುವ ಮೂಲಕ ದೆಹಲಿಯಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ.

ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಮೇಲೆ ಕುಳಿತಿರುವ ಅರವಿಂದ್ ಕೇಜ್ರಿವಾಲ್, ಅಭೂತಪೂರ್ವ ಗೆಲುವು ಒದಗಿಸಿಕೊಟ್ಟ ರಾಷ್ಟ್ರ ರಾಜಧಾನಿ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಆಪ್ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಜನತೆಯ ಒಗ್ಗಟ್ಟನ್ನು ಬಲಪಡಿಸಿದ್ದರ ಪರಿಣಾಮವಾಗಿ ನಮಗೆ ಮತ್ತೆ ಅಧಿಕಾರ ಬಂದಿದೆ. ಈ ಗೆಲುವನ್ನು ನಾವು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಈ ಗೆಲುವಿನಿಂದ ನಾವು ಹಿಗ್ಗುವುದಿಲ್ಲ ಬದಲಿಗೆ ದೆಹಲಿ ಜನತೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಅಮರ್ಥವಾಗಿ ನಿಭಾಯಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇನ್ನು ದೆಹಲಿ ಮತದಾರರ ನಿರ್ಣಯವನ್ನು ಸ್ವಾಗತಿಸಿರುವ ಬಿಜೆಪಿ, ಮತದಾರನ ನಿರ್ಣಯಕ್ಕೆ ತಲೆ ಬಾಗುವುದಾಗಿ ಹೇಳಿದೆ. ಈ ಕುರಿತು ಮಾತನಾಡಿರುವ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ, ಮುಂದಿನ ದಿನಗಳಲ್ಲಿ ಬಿಜೆಪಿ ಮತದಾರನ ಹೃದಯ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದ್ದಾರೆ.

ಅದರಂತೆ ಚುನಾವಣಾ ಫಲಿತಾಂಶವನ್ನು ವಿನಮ್ರತೆಯಿಂದ ಸ್ವೀಕರಿಸಿವುದಾಗಿ ಹೇಳಿರುವ ಕಾಂಗ್ರೆಸ್, ತನ್ನ ಕಳಪಡೆ ಪ್ರದರ್ಶನದ ಹೊರತಾಗಿಯೂ ಮತದಾರ ಬಿಜೆಪಿಯನ್ನು ತಿರಸ್ಕರಿಸಿರುವುದು ಸ್ವಾಗತಾರ್ಹ ಎಂದು ಹೇಳಿದೆ.

ದೆಹಲಿ ನಾಶಕ್ಕೆ ಕಾರಣ ಹೇಳಿದ ಮಾಜಿ ರಾಷ್ಟ್ರಪತಿ ಮಗಳು!

ಮತ್ತೆ ಅಧಿಕಾರ ಪಡೆದ ಆಪ್’ಗೆ ಧನ್ಯವಾದ ತಿಳಿಸುವುದಾಗಿ ಹೇಳಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಪಕ್ಷ ಬಲವರ್ಧನೆಗೆ ಅಗತ್ಯ ಕ್ರಮಕ ಕೈಗೊಳ್ಳುವುದಾಗಿ ಭರವಸೆ ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ದೆಹಲಿ ಮತದಾರ ಮತ್ತೆ ಆಪ್ ಕೈ ಹಿಡಿದಿದ್ದು, ಮೂರನೇ ಬಾರಿಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯಾಗಿ ಸ್ವೀಕರಿಸಿದ್ದಾರೆ. ಈ ಮೂಲಕ ಆಪ್’ನ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿದ್ದಾರೆ ಎಂಬ ಸಂದೇಶ ದೇಶಕ್ಕೆ ರವಾನೆಯಾಗಿದೆ.

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios