ಪಕ್ಷಾತೀತವಾಗಿ ಕೆಲಸ, ನವದೆಹಲಿಯಲ್ಲಿ ಡಾ. ಡಿ ವಿರೇಂದ್ರ ಹೆಗ್ಗಡೆ ಸುದ್ಧಿಗೋಷ್ಠಿ!
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ದೆಹಲಿಯ್ಲಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾವುದೇ ಪಕ್ಷಕ್ಕೆ ಹೊಂದಿಕೊಳ್ಳುವುದಿಲ್ಲ, ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಹೆಗ್ಗಡೆ ಸುದ್ದಿಗೋಷ್ಠಿ ವಿವರ ಇಲ್ಲಿದೆ.
ನವದೆಹಲಿ(ಜು.21): ಗ್ರಾಮೀಣ ಅಭಿವೃದ್ಧಿ, ಮಹಿಳಿಯರ ಸಬಲೀಕರಣ, ಗ್ರಾಮೋದ್ಯೋಗ ಸೇರಿದಂತೆ ಹಲವು ಪ್ರಯೋಗಗಳನ್ನು ಮಾಡಿ ಯಶಸ್ಸು ಕಂಡಿದ್ದೇವೆ. ಇದೀಗ ಈ ಯೋಜನೆಗಳನ್ನು ಬೇರೆ ರಾಜ್ಯಗಳಿಗೆ ವಿಸ್ತರಿಸಲು ಅವಕಾಶ ಸಿಕ್ಕಿದೆ. ಸರ್ಕಾರದ ಬೆಂಬಲವೂ ಇರುವುದರಿಂದ ಪರಿಣಾಮಕಾರಿಯಾಗಿ ಯೋಜನೆ ಜಾರಿಗೆ ತರಲು ಸಹಾಯವಾಗಲಿದೆ ಎಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿರೇಂದ್ರ ಹೆಗ್ಗಡೆ, ಯಾವುದೇ ಪಕ್ಷಕ್ಕೆ ಹೊಂದಿಕೊಳ್ಳುವುದಿಲ್ಲ. ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಯಾವುದೇ ಫಲಾಪೇಕ್ಷೆ ಮಾಡದೇ ಕೆಲಸ ಮಾಡಿದ್ದೇವೆ. ಇಂದು ಮೊದಲ ಬಾರಿಗೆ ಕಲಾಪಕ್ಕೆ ಹಾಜರಾಗಿದ್ದೇನೆ. ಮುಂದೆ ಕಾರ್ಯಗಳ ಬಗ್ಗೆ ಚಿಂತನೆ ಮಾಡುತ್ತೇನೆ ಎಂದು ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಸಂಸತ್ ಒಳಗೆ ನೋಡುವ ಆಸೆ ಮೊದಲಿನಿಂದಲೂ ಇತ್ತು. ಆದರೆ ಸಂಸತ್ ಸದಸ್ಯನಾಗಿ ಒಳಗೆ ಹೋಗುವ ಅವಕಾಶ ಸಿಕ್ಕಿದೆ ಎಂದು ಹೆಗ್ಗಡೆ ಸಂತಸ ವ್ಯಕ್ತಪಡಿಸಿದರು. ರಾಜ್ಯಸಭೆ ಒಳಗೆ ಹೋಗಿ ನೋಡಿದ ಮೇಲೆ ತುಂಬಾ ಗೌರವ ಬಂತು. ಎಲ್ಲಾ ಭಕ್ತರು ರಾಜ್ಯಸಭಾ ಆಯ್ಕೆಯಿಂದ ಸಂತೋಷ ಪಟ್ಟಿದ್ದಾರೆ. ಎಲ್ಲರೂ ಗೌರವ ಸಲ್ಲಿಸುತ್ತಿದ್ದಾರೆ ಎಂದು ವಿರೇಂದ್ರ ಹೆಗ್ಗಡೆ ಹೇಳಿದರು. ಮೊದಲು ಅರ್ಜಿ ಹಾಕಿ ಪದವಿ ಪಡೆಯುತ್ತಿದ್ದರು. ಆದರೆ ಈಗ ಕೆಲಸ ಮಾಡಿದವರನ್ನು ಗುರುತಿಸಿ ಗೌರವ ನೀಡಲಾಗುತ್ತಿದೆ ಎಂದಿದ್ದಾರೆ.
ಕನ್ನಡದಲ್ಲಿ, ದೇವರ ಹೆಸರಲ್ಲಿ ಡಾ.ವೀರೆಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ
ಕನ್ನಡದಲ್ಲಿ ಪ್ರಮಾಣವಚನ
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ಹೆಗ್ಗಡೆ ಇಂದು ಸ್ಪೀಕರ್ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ೇ
ಹೆಗ್ಗಡೆಗೆ ದೆಹಲಿಯಲ್ಲಿ ಗೌರವಯುತ ಸ್ವಾಗತ
ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಗುರುವಾರ ದೆಹಲಿ ಸಂಸತ್ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗೌರವ ಪೂರ್ವಕವಾಗಿ ಸ್ವಾಗತಿಸಿದರು. ಡಾ. ವೀರೇಂದ್ರ ಹೆಗ್ಗಡೆಯವರ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಹಾಗೂ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದರು.
ಧರ್ಮಸ್ಥಳಕ್ಕೆ ತಮ್ಮ ಪೂರ್ವಜರಿಗೆ ಸಂದ ಗೌರವ: ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಜಿಎಸ್‌ಟಿ ಪ್ರಶಂಸೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಇದರ 2021-22 ರ ಸಾಲಿಗೆ ಸರ್ಕಾರಕ್ಕೆ ಸಲ್ಲಿಸಿರುವ ವಾಣಿಜ್ಯಕರ ನಿರ್ವಹಣೆಯಲ್ಲಿ ತೋರಿಸಿರುವ ಗುಣಮಟ್ಟಕ್ಕಾಗಿ ಕೇಂದ್ರ ಸರ್ಕಾರ, ಹಣಕಾಸು ಇಲಾಖೆಯ ಜಿ.ಎಸ್.ಟಿ. ಅಧ್ಯಕ್ಷರಿಂದ ಪ್ರಶಂಸಾ ಪತ್ರ ಲಭ್ಯವಾಗಿದೆ. ಈ ಪ್ರಮಾಣ ಪತ್ರದಲ್ಲಿ ಯೋಜನೆಯು 2021-22 ರ ಸಾಲಿನಲ್ಲಿ ಪ್ರಾಮಾಣಿಕವಾಗಿ ಜಿ.ಎಸ್.ಟಿ. ಪಾವತಿ ಮಾಡಿದ್ದಲ್ಲದೆ, ಸಮಯಕ್ಕೆ ಸರಿಯಾಗಿ ರಿಟರ್ನ್‌ಗಳನ್ನು ಸಲ್ಲಿಸಿರುವುದರಿಂದ ದೇಶದ 1.2 ಕೋಟಿ ಜಿಎಸ್‌ಟಿ ನೋಂದಣಿದಾರರ ಪೈಕಿ 50,000 ಅತ್ಯುತ್ತಮ ವಾಣಿಜ್ಯ ಸಂಸ್ಥೆಗಳಲ್ಲೊಂದು ಎಂದು ಜಿ.ಎಸ್.ಟಿ. ವಿಭಾಗದ ನೋಟಿಫಿಕೇಶನ್‌ನಲ್ಲಿ ತಿಳಿಸಲಾಗಿದೆ.