ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, "ಗಾಳಿ ಕುಡಿಯಲು ಬಂದಿಲ್ಲ, ನೀರು ಕುಡಿಯಬೇಕಿದೆ" ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ರಾಜ್ಯ ರಾಜಕೀಯದ ಬದಲಾವಣೆಗಳ ಕುರಿತು ಮಾತನಾಡಲು ನಿರಾಕರಿಸಿದರು.

ನವದೆಹಲಿ (ಏ.24) ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ಚುನಾವಣೆ ಕುರಿತು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ನಾನು ಮಾಧ್ಯಮಗಳ‌ ಮುಂದೆ ಮಾತಾಡುವುದಿಲ್ಲ ಎಂದ ಅವರು, ಅಲ್ಪಸಂಖ್ಯಾತ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಮ್ಮ ಕಡೆಯಿಂದ ತಪ್ಪಾಗಿಬಹುದು. ಕೆಲವು ಬಾರಿ ಅವರ ಕಡೆಯಿಂದ ತಪ್ಪಾಗಿರಬಹುದು ಎಂದು ತಿಳಿಸಿದರು.

ಇನ್ನು ಅಮಾನತು ವಾಪಸ್ ಪಡೆಯುವ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ, ಇದು ಅಮಾನತು ಅಲ್ಲ. ಬದಲಿಗೆ ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಒಮ್ಮೆ ರಾಜೀನಾಮೆ ಪತ್ರ ವಿಶ್ಲೇಷಣೆ ಮಾಡಿ ಎಂದು ತಿಳಿಸಿದರು.