Asianet Suvarna News Asianet Suvarna News

ಆದಾಯ ಮೀರಿ ಆಸ್ತಿ ಗಳಿಕೆ, ತಮಿಳುನಾಡು ಸಚಿವ ಪೊನ್ಮುಡಿಗೆ 3 ವರ್ಷ ಜೈಲು!

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿ ದಂಡ ವಿಧಿಸಿದೆ.
 

disproportionate assets case Tamil Nadu Minister Ponmudy sentenced to 3 years in jail san
Author
First Published Dec 21, 2023, 2:55 PM IST

ಚೆನ್ನೈ (ಡಿ.21):  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆಡಳಿತಾರೂಢ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಚಿವ ಪೊನ್ಮುಡಿ ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದ್ದು, ಪ್ರಕರಣವು ತುಂಬಾ ಹಳೆಯದಾಗಿದೆ ಎಂದು ವಾದಿಸಿದ್ದರು. ಅಲ್ಲದೆ, ಸಚಿವರಿಗೆ ಈಗ 73 ವರ್ಷ, ಪತ್ನಿಗೆ 60 ವರ್ಷ. ವಯಸ್ಸಿನ ಕಾರಣ ನೀಡಿ ಕನಿಷ್ಠ  ಶಿಕ್ಷೆ ನೀಡುವಂಯೆ ಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ, ಪತ್ನು ಹಾಗೂ ಪೊನ್ಮುಡಿ ಇಬ್ಬರಿಗೂ ತಲಾ 50 ಲಕ್ಷ ರೂಪಾಯಿ ದಂಡ ವಿಧಿಸುವ ತೀರ್ಪು ನೀಡಿದೆ. ಮದ್ರಾಸ್ ಹೈಕೋರ್ಟ್ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದ್ದು, ಅಪರಾಧಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ದೊಡ್ಡ ಹಿನ್ನಡೆಯಲ್ಲಿ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರನ್ನು ಮದ್ರಾಸ್ ಹೈಕೋರ್ಟ್ ದೋಷಿ ಎಂದು ಘೋಷಿಸಿ, ಅವರ ಖುಲಾಸೆಯನ್ನು ಮಂಗಳವಾರ ರದ್ದು ಮಾಡಿತ್ತು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ:  1996-2001ರ ಅವಧಿಯಲ್ಲಿ ಆಗಿನ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿ ವಿರುದ್ಧ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಪ್ರಕರಣ ದಾಖಲು ಮಾಡಿತ್ತು. ಇದರಲ್ಲಿ ಇಬ್ಬರ ಆದಾಯದಲ್ಲಿ 1.4 ಕೋಟಿ ರೂಪಾಯಿ ಆ ಸಮಯದಲ್ಲಿ ಅವರ ತಿಳಿದಿರುವ ಆದಾಯದ ಮೂಲಗಳಿಗೆ ಅಸಮಾನವಾಗಿತ್ತು. ಇದು ಆದಾಯ ಮೀರಿ ಆಸ್ತಿ ಗಳಿಕೆ ಎಂದು ಪ್ರಕರಣ ದಾಖಲಿಸಲಾಗಿತ್ತು. ಪೊನ್ಮುಡಿ ಅವರು 1996-2001ರ ಅವಧಿಯಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಸಂಪತ್ತು ಸಂಗ್ರಹಿಸಿದ್ದಾರೆ ಎಂದು ಡಿವಿಎಸಿ ಹೇಳಿದೆ. ಜೂನ್ 28 ರಂದು, ವೆಲ್ಲೂರಿನ ಪ್ರಧಾನ ಸೆಷನ್ಸ್ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು., ಪ್ರಾಸಿಕ್ಯೂಷನ್ ಸಾಕಷ್ಟು ಸಾಕ್ಷ್ಯಗಳನ್ನು ನೀಡಲು ವಿಫಲವಾಗಿದೆ ಎಂದು ಹೇಳಿತ್ತು.

ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶೆ, ಎನ್ ವಸಂತಲೀಲಾ ಅವರು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಕೆ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಆಸ್ತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದಾರೆ. ತಮಿಳುನಾಡು ಸಚಿವ ಕೆ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೂನ್‌ನಲ್ಲಿ ವೆಲ್ಲೂರಿನ ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ ಅವರ ಖುಲಾಸೆಯ ಪರಿಷ್ಕರಣೆಯನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಮದ್ರಾಸ್ ಹೈಕೋರ್ಟ್ ಆಗಸ್ಟ್‌ನಲ್ಲಿ ನಿರ್ಧಾರ ಮಾಡಿತ್ತು.

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಕೇಸ್: ಸಂಪುಟ ನಿರ್ಧಾರ ಪ್ರಶ್ನಿಸಿದ ರಿಟ್‌ ವಿಚಾರಣೆ

Follow Us:
Download App:
  • android
  • ios