ಉತ್ತರ ಭಾರತ, ಚೀನಾ, ಆಫ್ಘಾನಿಸ್ತಾನ, ಪಾಕಿಸ್ತಾನ ಸೇರಿದಂತೆ ಹಲವು ಕಡೆ ಭೂಕಂಪ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ದೆಹಲಿ, ನೋಯ್ಡಾ, ಗುರುಗಾಂವ್ ಸೇರಿದಂತೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಭೂಕಂಪ ಸಂಭವಿಸಿದೆ.

ನವದೆಹಲಿ(ಮಾ.21): ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇಂದು ರಾತ್ರಿ ಇದ್ದಕ್ಕಿದ್ದಂತೆ ಭೂಮಿ ಕಂಪಿಸಲು ಆರಂಭಿಸಿದೆ. ಮನೆಯಲ್ಲಿದ್ದ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರೂ ಹೊರಗೆ ಬಂದಿದ್ದಾರೆ. ಕೆಲ ಕ್ಷಣಗಳ ಕಾಲ ಭೂಮಿ ಕಂಪಿಸಿದೆ. ದೆಹಲಿ, ನೋಯ್ಡಾ, ಗುರುಗಾಂವ್, ಗಾಜಿಯಾದಾಬ್ ಸೇರಿದಂತೆ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದೆ. ಇದೀಗ ಭಾರತದಲ್ಲಿ ಆತಂಕ ಹೆಚ್ಚಾಗಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ 384 ಕಿಲೋಮೀಟರ್ ದೂರದಲ್ಲಿರುವ ಹಿಂದೂಕುಶ್ ಪ್ರದೇಶ ಭೂಕಂಪನದ ಕೇಂದ್ರಬಿಂದುವಾಗಿದೆ. ರಾತ್ರಿ 12.17ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 6.6ರ ತೀವ್ರತೆ ದಾಖಲಾಗಿದೆ. ಇದು ಪ್ರಬಲ ಭೂಪಕಂಪವಾಗಿದೆ.

ಪಂಜಾಬ್‌ನ ಕೆಲ ಭಾಗದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.ದೆಹಲಿಯಲ್ಲಿ 4.4ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಉತ್ತರ ಭಾರತ, ಚೀನಾ, ಆಫ್ಘಾನಿಸ್ತಾನ, ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳಲ್ಲಿ ಭೂಮಿ ಕಂಪಿಸಿದೆ. ಪ್ರಬಲ ಭೂಕಂಪ ಇದಾಗಿದ್ದು ಈ ಕುರಿತು ಮತ್ತಷ್ಟು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. 

ಹಲವರು ದೆಹಲಿ ಪ್ರಬಲ ಭೂಕಂಪದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದರೆ. ನಿಮಿಷಗಳ ಕಾಲ ದೆಹಲಿ ಹಾಗೂ NCR ವ್ಯಾಪ್ತಿ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದಿದ್ದಾರೆ. ಈ ಕುರಿತು ಕೆಲ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ 384 ಕಿಲೋಮೀಟರ್ ದೂರದಲ್ಲಿರುವ ಹಿಂದೂಕುಶ್ ಪ್ರದೇಶ ಭೂಕಂಪನದ ಕೇಂದ್ರಬಿಂದುವಾಗಿದೆ. ರಾತ್ರಿ 12.17ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 6.6ರ ತೀವ್ರತೆ ದಾಖಲಾಗಿದೆ. ಇದು ಪ್ರಬಲ ಭೂಪಕಂಪವಾಗಿದೆ.

Scroll to load tweet…