ನವದೆಹಲಿ(ಡಿ.20): ರಾಷ್ಟ್ರ ರಾಜಧಾನಿ ನವದೆಹಲಿ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪದ ಕೇಂದ್ರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಹಿಂದುಕುಷ್ ಪರ್ವತ ಪ್ರದೇಶದಲ್ಲಿ ಭೂಕಂಪದ ಕೇಂದ್ರ ಪತ್ತೆಯಾಗಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪದಿಂದ ದೇವಸ್ಥಾನಕ್ಕೇಕೆ ಹಾನಿಯಾಗುವುದಿಲ್ಲ?

ದೆಹಲಿಯಲ್ಲಿ ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ನಡುಗಿದ್ದು, ಜಮ್ಮು ಮತ್ತು ಕಾಶ್ಮೀರ, ಹರಿಯಾಣಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅತ್ಪಾತ ಕಿಸ್ತಾನದಲ್ಲೂ ಭೂಮಿ ಕಂಪಿಸಿದ ಕುರಿತು ವರದಿಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯ ಎನ್‌ಸಿಆರ್‌ ಪ್ರದೇಶದಲ್ಲಿ ಹೆಚ್ಚಿನ ತೀವ್ರತೆ ಕಂಡುಬಂದಿದೆ.