ಯಸ್‌ ಬ್ಯಾಂಕ್‌ ಅಕ್ರಮ: ರಾಣಾ ಕಪೂರ್‌, ಇತರರ 2,800 ಕೋಟಿ ಆಸ್ತಿ ಜಪ್ತಿ| ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಜಪ್ತಿ| ಲಂಡನ್‌ ಮತ್ತು ನ್ಯೂಯಾರ್ಕ್ನಲ್ಲಿರುವ ಫ್ಲ್ಯಾಟ್‌ಗಳನ್ನು ಕೂಡ ವಶ

ನವದೆಹಲಿ(ಜು.10): ಯಸ್‌ ಬ್ಯಾಂಕ್‌ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಸಹ ಸ್ಥಾಪಕ ರಾಣಾ ಕಪೂರ್‌ ಮತ್ತು ಇತರರಿಗೆ ಸೇರಿದ 2,800 ಕೋಟಿ ರು. ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ಜಪ್ತಿ ಮಾಡಿದೆ.

ನೌಕರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕಪೂರ್‌ ಅವರಿಗೆ ಸೇರಿದ ಲಂಡನ್‌ ಮತ್ತು ನ್ಯೂಯಾರ್ಕ್ನಲ್ಲಿರುವ ಫ್ಲ್ಯಾಟ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಪೂರ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಚ್‌ಎಫ್‌ಎಲ್‌ ಪ್ರವರ್ತಕರಾದ ಕಪಿಲ್‌ ಮತ್ತು ಧೀರಜ್‌ ವಾಧ್ವಾನ್‌ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನೂ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.