ಮಲ್ಯ, ನೀರವ್, ಚೋಕ್ಸಿಯ ಆಸ್ತಿ ಸೀಜ್, 9,371 ಕೋಟಿ ರೂ ಬ್ಯಾಂಕ್‌ಗೆ ಹಸ್ತಾಂತರ!
* ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಆಸ್ತಿ ಮುಟ್ಟುಗೋಲು
* 18,170.02 ಕೋಟಿ ರೂ. ಮೌಲ್ಯದ ಸಂಪತ್ತನ್ನು ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
* 9,371.17 ಕೋಟಿ ರೂ. ಮೌಲ್ಯದ ಸಂಪತ್ತು ಬ್ಯಾಂಕ್‌ಗೆ ಹಸ್ತಾಂತರ
ನವದೆಹಲಿ(ಜೂ.23): ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಬ್ಯಾಂಕ್‌ಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಹೀಗಿರುವಾಗ ಈ ಪ್ರಕರಣ ಸಂಬಂಧ ಅವರ 18,170.02 ಕೋಟಿ ರೂ. ಮೌಲ್ಯದ ಸಂಪತ್ತನ್ನು ಮುಟ್ಟುಗೋಲು ಹಾಕಿಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಇದರಲ್ಲಿ 9,371.17 ಕೋಟಿ ರೂ. ಮೌಲ್ಯದ ಸಂಪತ್ತನ್ನು ಅವರ ವಂಚನೆಯಿಂದ ನಷ್ಟ ಅನುಭವಿಸಿದ್ದ ಸಾರ್ವಜನಿಕ ವಲಯ ಬ್ಯಾಂಕುಗಳಿಗೆ ಹಾಗೂ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದೂ ತಿಳಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಾರಿ ನಿರ್ದೇಶನಾಲಯ ಈ ಮೊತ್ತವು ಬ್ಯಾಂಕ್‌ಗಳಿಗೆ ಆದ ನಷ್ಟದ ಒಟ್ಟು ಮೊತ್ತದ ಶೇ 80.45ರಷ್ಟಾಗುತ್ತದೆ. ಹಣ ಅಕ್ರಮ ವರ್ಗಾವಣೆ ಪ್ರಕರಣ (ಪಿಎಂಎಲ್‌ಎ) ಅಡಿ ಈ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಪೈಕಿ, 9,371.17 ಕೋಟಿ ರೂ ಮೌಲ್ಯದ ಸ್ವತ್ತುಗಳನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದೆ.
ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ ಮೂಲಕ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳನ್ನು ವಂಚಿಸಿದ್ದಾರೆ. ಇದರಿಂದಾಗಿ ಬ್ಯಾಂಕ್‌ಗಳಿಗೆ ಸುಮಾರು 22,585.83 ಕೋಟಿ ರೂ. ನಷ್ಟವಾಗಿದೆ ಎನ್ನಲಾಗಿದೆ.
ಈವರೆಗೆ ಇಲ್ಲಿಯ ತನಕ ಪಿಎಂಎಲ್‌ಎ ಅಡಿಯಲ್ಲಿ 18,170.02 ಕೋಟಿ ರೂಪಾಯಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 329.67 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಲಾಗಿದೆ. 9041.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು, ಅಂದರೆ ಒಟ್ಟು ನಷ್ಟದ ಶೇ 40ರಷ್ಟನ್ನು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ.