ನವದೆಹಲಿ(ಫೆ.19):  ವಿಶ್ವದಲ್ಲಿ ವಿದ್ಯಾವಂತರೇ ಹೆಚ್ಚಾಗಿ ಭಯೋತ್ಪಾದನೆ ಹರಡುತ್ತಿದ್ದಾರೆ. ಒಂದು ವರ್ಗ, ದೇಶದಲ್ಲಿ ಅಶಾಂತಿ ಸೃಷ್ಟಿಸುವ, ಭಯೋತ್ಪಾದನೆಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿದೆ. ಆದರೆ ಈ ವರ್ಗದಲ್ಲಿ ವಿದ್ಯಾವಂತರೇ ಹೆಚ್ಚಿದ್ದಾರೆ ಎಂದು ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ.

ಮೋದಿ ರಾಜತಾಂತ್ರಿಕತೆಗೆ ಕೆರಿಬಿಯನ್‌ ದೇಶಗಳ ಶ್ಲಾಘನೆ.

ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪಾಲ್ಗೊಂಡ ಮೋದಿ, ಒಂದೆಡೆ ಜನ ಹಿಂಸಾಚಾರವನ್ನು ಹರಡಿದರೆ, ಮತ್ತೊಂದು ವರ್ಗದ ಜನ ತಮ್ಮ ಜೀವದ ಹಂಗು ತೊರೆದು ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜನರ ಪ್ರಾಣ ಉಳಿಸಲು ತಮ್ಮ ಪ್ರಾಣವನ್ನೆ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.

 

ನವ ಭಾರತ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿ ಪ್ರಮುಖವಾಗಿದೆ. ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ಸದೃಢ ಭಾರತ ನಿರ್ಮಾಣವಾಗಲಿದೆ ಎಂದು ಮೋದಿ ಹೇಳಿದರು. ಇನ್ನು ಪಶ್ಚಿಮ ಬಂಗಾಳ ರಾಜ್ಯ ಪಾಲ ಜಗದೀಪ್ ಧನ್‌ಕರ್ ಘಟಿಕೋತ್ಸವಲ್ಲಿ ಪಾಲ್ಗೊಂಡಿದ್ದರು.