ಕರ್ನಾಟಕದಲ್ಲಿನ ವಿಧಾನಸಭಾ ಚುನಾವಣೆ ಕೆಲ ರಾಜ್ಯದಲ್ಲಿನ ಉಪಚುನಾವಣೆ ಫಲಿತಾಂಶ ಘೋಷಣೆಯಾದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಚುನಾವಣಾ ಆಯೋಗ ಹೇರಿದ್ದ ಚುನಾವಣಾ ನೀತಿ ಸಂಹಿತೆಯನ್ನು ಹಿಂತೆಗೆದುಕೊಂಡಿದೆ.
ನವದೆಹಲಿ(ಮೇ.15): ಕರ್ನಾಟಕ ವಿಧಾನಸಭಾ ಚುನಾವಣೆ ಕಾರಣದಿಂದ ರಾಜ್ಯದಲ್ಲಿ ಜಾರಿಯಾಗಿದ್ದ ಚುನಾವಣಾ ನೀತಿ ಸಂಹಿತೆಯನ್ನು ಆಯೋಗ ಹಿಂತೆಗೆದುಕೊಂಡಿದೆ. ಫಲಿತಾಂಶ ಘೋಷಣೆಯಾದ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಜಾರಿಗೊಳಿಸಿದ್ದ ಚುನಾವಣಾ ನೀತಿ ಸಂಹಿತೆಯನ್ನು ಹಿಂತೆಗೆದುಕೊಂಡಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ಮೆಘಾಲಯ, ಒಡಿಶಾ, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲೂ ಜಾರಿಯಾಗಿದ್ದ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ಹಿಂತೆಗೆದುಕೊಂಡಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕಾರಣದಿಂದ ನೀತಿ ಸಂಹಿತೆ ಜಾರಿಯಾಗಿದ್ದರೆ, ಇನ್ನುಳಿದ ರಾಜ್ಯಗಳಲ್ಲಿ ವಿಧಾನಸಭಾ ಹಾಗೂ ಲೋಕಸಭಾ ಉಪ ಚುನಾವಣೆ ಕಾರಣದಿಂದ ನೀತಿ ಸಂಹಿತೆ ಜಾರಿಯಾಗಿತ್ತು.
ಚುನಾವಣಾ ನೀತಿ ಸಂಹಿತೆಯನ್ನು ಈ ತಕ್ಷಣದಿಂದ ಹಿಂಪೆದಿರುವುದಾಗಿ ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಅಶ್ವಾನಿ ಕುಮಾರ್ ಮೊಹಾಲ್ ಸುತ್ತೋಲೆ ಹೊರಡಿಸಿದ್ದಾರೆ. ನೀತಿ ಸಂಹಿತೆ ಕಾರಣದಿಂದ ಜಾಹೀರಾತು, ಫ್ಲೆಕ್ಸ್, ಸೇರಿದಂತೆ ಬಹುತೇಕ ವಿಚಾರಗಳಿಗೆ ನಿರ್ಬಂಧ ವಿಧಿಸಲಾಗಿತ್ತು.ಇದೀಗ ಈ ಎಲ್ಲಾ ನಿರ್ಬಂಧಗಳು ತೆರವಾಗಲಿದೆ.
ಜೆಡಿಎಸ್-ಕಾಂಗ್ರೆಸ್ ಒಳಮೈತ್ರಿ ನನ್ನ ಸೋಲಿಗೆ ನಾಂದಿ: ಸಿ.ಟಿ.ರವಿ
ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29 ರಂದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ತಂದಿತ್ತು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಇತ್ತ ನಾಯಕರು ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಘಟನೆಗಳು ನಡೆದಿತ್ತು. ಇನ್ನು ನಾಯಕರು ಚುನಾವಣಾ ಪ್ರಚಾರಕ್ಕೆ ತೆರಳಿದ ವೇಳೆ ಅಧಿಕಾರಿಗಳು ಹೆಲಿಕಾಪ್ಟರ್ ಸೇರಿದಂತೆ ವಾಹನ ತಪಾಸಣೆ ನಡೆಸಿದ ಘಟನೆಗಳು ವರದಿಯಾಗಿತ್ತು.
ಚುನಾವಣಾ ಸೂಸೂತ್ರವಾಗಿ ನಡೆಯಲು ಹಾಗೂ ಚುನಾವಣಾ ಅಕ್ರಮ ತಡೆಗಟ್ಟಲು ಆಯೋಗ ನೀತಿ ಸಂಹಿತೆ ಜಾರಿಗೆ ತರುತ್ತದೆ. ಇದೇ ವೇಳೆ ಸಾರ್ವಜನಿಕರಿಗೆ ದೂರು ನೀಡಲುವ ಅವಕಾಶವನ್ನೂ ಕಲ್ಪಿಸಿತ್ತು. ಆ್ಯಪ್ ಮೂಲಕ ಚುನಾವಣಾ ಅಕ್ರಮದ ಮಾಹಿತಿ, ಫೋಟೋ, ವಿಡಿಯೋ ಹಂಚಿಕೊಳ್ಳಲು ಅವಕಾಶ ನೀಡಲಾಗಿತ್ತು. ಸಾರ್ವಜನಿಕರು ಸಿಟಿಜನ್ ಆ್ಯಪ್ ಮೂಲಕ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪೋಟೋ, ವಿಡೀಯೋ ಮೂಲಕ ನೇರ ಸೆರೆ ಹಿಡಿದು ವಾಯ್ಸ… ಮೂಲಕ ಕಳುಹಿಸಲು ಅಕಾಶ ನೀಡಲಾಗಿತ್ತು. ಇದು ನೇರವಾಗಿ ಚುನಾವಣಾಧಿಕಾರಿಗಳ ತಂಡಕ್ಕೆ ತಲುಪಲಿದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ತಂಡಗಳು ಕಾರ್ಯ ಪ್ರವೃತ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ.
Karnataka election results: ಕೆಲಸಗಾರರಿಗೆ ಇದು ಕಾಲವಲ್ಲ: ಸೋಮಣ್ಣ ಬೇಸರ
ಒಂದು ತಂಡ ಕಟ್ಟುನಿಟ್ಟಿನ ಚುನಾವಣಾ ಆಕ್ರಮಗಳನ್ನು ತಡೆಗಟ್ಟಲು ಸದಾ ಕಾವಲಾಗಿರುತ್ತದೆ. ಪ್ರತಿಯೊಬ್ಬ ನಾಗರೀಕರು ಈ ಆಪ್‌ಅನ್ನು ಸ್ವಯಂ ಪ್ರೇರಿತವಾಗಿ ಬಳಸಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಬೇಕು. ಇದರಿಂದ ಪಾರದರ್ಶಕ ಚುನಾವಣೆ ನಡೆಸಬಹುದಾಗಿದ್ದು, ಯಾವುದೇ ಆಕ್ರಮಗಳಿಗೆ ಅವಕಾಶ ಇಲ್ಲದಂತಾಗುತ್ತದೆ. ಇದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಕೂಡ ಆಗಿರುತ್ತದೆ ಎಂದು ಆಯೋಗ ಮನವಿ ಮಾಡಿತ್ತು.
