ಚುನಾವಣಾ ಆಯೋಗವೂ ಮಾರ್ಚ್ ಮಧ್ಯದಲ್ಲಿ ಅಂದರೆ ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
ನವದೆಹಲಿ: ಚುನಾವಣಾ ಆಯೋಗವೂ ಮಾರ್ಚ್ ಮಧ್ಯದಲ್ಲಿ ಅಂದರೆ ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. 7 ಹಂತಗಳಲ್ಲಿ ದೇಶಾದ್ಯಂತ ಸಂಸತ್ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆಲ ಮೂಲಗಳ ಮಾಹಿತಿ ಪ್ರಕಾರ, ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. 2019ರ ಲೋಕಸಭಾ ಚುನಾವಣೆಯಂತೆಯೇ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಏಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ.
ಮಾರ್ಚ್ 14 ರಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಬಿಜೆಪಿ ಈಗಾಗಲೇ 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಪ್ರಧಾನಿ ಮೋದಿ, ಅಮಿತ್ ಷಾ ಸೇರಿದಂತೆ ಗಣ್ಯ ನಾಯಕರ ಹೆಸರು ಮೊದಲ ಪಟ್ಟಿಯಲ್ಲಿದೆ. ಮೂರನೇ ಬಾರಿಯೂ ಗೆದ್ದು ಬರುವ ನಿರೀಕ್ಷೆಯಲ್ಲಿ ಬಿಜೆಪಿ ಇದೆ. ಮೊದಲ ಪಟ್ಟಿಯಲ್ಲಿ, ಕೇಸರಿ ಪಕ್ಷವು ತನ್ನ ಪಕ್ಷದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಪ್ಲಬ್ ಕುಮಾರ್ ದೇಬ್ ಅವರನ್ನು ಕೂಡ ಕಣಕ್ಕಿಳಿಸಿದೆ. ಇತ್ತ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವೂ ಕೂಡ ಚುನಾವಣೆಗೆ ಸನ್ನದ್ಧವಾಗಿದೆ. ಇಂಡಿಯಾ ಕೂಟದ ಜೊತೆ ಸೀಟು ಹಂಚಿಕೆ ವಿಚಾರ ಇನ್ನು ಚರ್ಚೆಯಲ್ಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಚುನಾವಣಾ ಬಾಂಡ್ ಮಾಹಿತಿ ಬಹಿರಂಗ: ಜೂ.30ರವರೆಗೆ ಸಮಯ ಕೇಳಿದ ಎಸ್‌ಬಿಐ
ರಾಜ್ಯಸಭಾ ಸಂಸದ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ, ಲೋಕಸಭಾ ಅಖಾಡಕ್ಕೆ ಬಿಜೆಪಿ ಅಧ್ಯಕ್ಷ?
