ಇದಕ್ಕಿದ್ದಂತೆ ನಟ ವಿಜಯ್ ಜೊತೆ ಮಾತನಾಡಿದ ರಾಹುಲ್ ಗಾಂಧಿ, ಮಮತಾಗೂ ಫೋನ್ ಕಾಲ್, ಸೋಲಿನ ಆಘಾತದಲ್ಲಿರುವ ಮಮತಾ ಬ್ಯಾನರ್ಜಿಗೆ ರಾಹುಲ್ ಗಾಂಧಿ ಹೇಳಿದ್ದೇನು? ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ನೀಡುತ್ತಾ
ನವದೆಹಲಿ (ಮೇ.04) ಪಂಚ ರಾಜ್ಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಟಿಎಂಸಿ ನೆಲಕಚ್ಚಿದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಕಂಡಿದೆ. ಇತ್ತ ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ನೇೃತ್ವದ ಬಿಜೆಪಿ ಹ್ಯಾಟ್ರಿಕ್ ಗೆಲವು ಕಂಡಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರ ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಟಿವಿಕೆ ನಟ ವಿಜಯ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಸೋಲಿನ ಅಘಾತದಲ್ಲಿರುವ ಮಮತಾ ಬ್ಯಾನರ್ಜಿ ಹಾಗೂ ಎಂಕೆ ಸ್ಟಾಲಿನ್ ಜೊತೆಗೂ ಮಾತನಾಡಿದ್ದಾರೆ.
ಟಿವಿಗೆಗೆ ಬೆಂಬಲ ನೀಡುತ್ತಾ ಕಾಂಗ್ರೆಸ್?
ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಗೆಲುವು ದಾಖಸಿ ಬಹುಮತದತ್ತ ದಾಪುಗಾಲಿಟ್ಟಿದೆ. ಇದರ ಬೆನ್ನಲ್ಲೇ ವಿಜಯ್‌ಗೆ ಜೊತೆ ಫೋನ್ ಮೂಲಕ ಮಾತನಾಡಿದ ರಾಹುಲ್ ಗಾಂಧಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಯುವ ಸಮೂಹದ ಧ್ವನಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಯುವ ಸಮೂಹದ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಮಾತುಕತೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಾ ಅನ್ನೋ ಚರ್ಚೆಗಳು ಶುರುವಾಗಿದೆ. ತಮಿಳುನಾಡಿನಲ್ಲಿ ಸದ್ಯ 3 ಸ್ಥಾನ ಕಾಂಗ್ರೆಸ್ ಗೆದ್ದುಕೊಂಡಿದ್ದರೆ 2ರಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 5 ಸ್ಥಾನದಲ್ಲಿರುವ ಕಾಂಗ್ರೆಸ್ , ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿ ಸರ್ಕಾರ ರಚಿಸಲು ನೆರವಾಗುತ್ತಾ ಅನ್ನೋ ಚರ್ಚೆಗಳು ನಡೆಯುತ್ತೆದೆ.
ಮಮತಾ ಬ್ಯಾನರ್ಜಿಗೆ ಹೇಳಿದ್ದೇನು?
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿರುವ ಟಿಎಂಸಿ ಮಕಾಡೆ ಮಲಗಿದೆ. ಇದರ ಬೆನ್ನಲ್ಲೇ ಕರೆ ಮಾಡಿ ಮಾತನಾಡಿದ ರಾಹುಲ್ ಗಾಂಧಿ ಪರಿಸ್ಥಿತಿ ಕುರಿತು ಅವಲೋಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ರಾಹುಲ್ ಗಾಂಧಿ ಮಾತನಾಡಿದ್ದಾರೆ. ಮಮತಾ ಬೆನ್ನಲ್ಲೇ ತಮಿಳುನಾಡಿನಲ್ಲಿ ಸೋಲಿನ ಆಘಾತದಲ್ಲಿರುವ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಜೊತೆಗೂ ಮಾತನಾಡಿದ್ದಾರೆ. ಡಿಎಂಕೆ ಕೂಡ ಇಂಡಿಯಾ ಒಕ್ಕೂದ ಮೈತ್ರಿ ಪಕ್ಷ.
ಇತ್ತ ತಮಿಳುನಾಡಿನಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗುತ್ತಿದೆ. ಇದರ ನಡುವೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು, ಶ್ರಮಿಸಿದ ನಾಯಕರಿಗೂ ಧನ್ಯವಾದ ಹೇಳಿದ್ದಾರೆ. ಜೊತೆಗೆ ತಮಿಳುನಾಡು ಹಾಗೂ ಪುದುಚೇರಿ ಜನತೆ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದಿದ್ದಾರೆ


