ಚುನಾವಣಾ ಬಾಂಡ್ ವಿಶ್ವದ ದೊಡ್ಡ ಹಗರಣ: ರಾಹುಲ್ ಗಾಂಧಿ ಆರೋಪ
ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದ ಬಳಿಕ ರದ್ದಾದ ಚುನಾವಣಾ ಬಾಂಡ್ ಯೋಜನೆ ವಿಶ್ವದ ದೊಡ್ಡ ಹಗರಣ ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಲ್ಲದೇ ಚುನಾವಣಾ ಆಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರನ್ನೇ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಹೈದರಾಬಾದ್ (ಏ.07): ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದ ಬಳಿಕ ರದ್ದಾದ ಚುನಾವಣಾ ಬಾಂಡ್ ಯೋಜನೆ ವಿಶ್ವದ ದೊಡ್ಡ ಹಗರಣ ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಲ್ಲದೇ ಚುನಾವಣಾ ಆಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರನ್ನೇ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಹೈದರಾಬಾದ್‌ನಲ್ಲಿ ಚುನಾವಣಾ ಭಾಷಣದಲ್ಲಿ ಮಾತನಾಡಿದ ರಾಹುಲ್,‘ದೇಶದಲ್ಲಿ ಪ್ರತಿ ದಿನ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಒಂದು ರೂಪಾಯಿ ಸಾಲವನ್ನು ಮನ್ನಾ ಮಾಡದೇ ಕೇವಲ ಶ್ರೀಮಂತರ 16 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದೆ ಎಂದು ದೂಷಿಸಿದರು. ಜೊತೆಗೆ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ದೇಶದಲ್ಲಿ ಕೋಟ್ಯಂತರ ಜನರು ಬಡವರಾಗಿದ್ದಾರೆ’ ಎಂದರು.
Lok Sabha Election 2024: ಪ್ರಧಾನಿ ಮೋದಿಯಿಂದ ದೇಶ ಹಾಗೂ ಪ್ರಜಾಪ್ರಭುತ್ವ ನಾಶ: ಸೋನಿಯಾ ಗಾಂಧಿ
ಪಂಚ್ ನ್ಯಾಯ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಿ, ಕಿಸಾನ್ ನ್ಯಾಯ್ ಅಡಿಯಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿ ಮಾಡಲಾಗುವುದು. ಹೀಗಾಗಿ ನಮ್ಮ ಪಕ್ಷದ ಪ್ರಣಾಳಿಕೆ ಜನರ ಆಶಯವನ್ನು ಪೂರ್ಣವಾಗಿ ಹೊಂದಿದೆ ಎಂದು ರಾಹುಲ್ ಭರವಸೆ ನೀಡಿದರು. ಕಾಂಗ್ರೆಸ್ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಈಗಾಗಲೇ 30,000 ಹುದ್ದೆಗಳನ್ನು ಭರ್ತಿ ಮಾಡಿದೆ. ಮುಂದೆ ಇನ್ನು 50,000 ಹುದ್ದೆಗಳ ನೇಮಕ ಮಾಡಲಾಗುವುದು ಎಂದು ಹೇಳಿದರು.
ದ್ವೇಷ ತುಂಬಿದ ಅಸುರ ಶಕ್ತಿ ವಿರುದ್ಧ ನಮ್ಮ ಹೋರಾಟ: ಶಕ್ತಿ ವಿರುದ್ಧ ಹೋರಾಟ ಕುರಿತ ತಮ್ಮ ಹೇಳಿಕೆಯನ್ನು ಬಿಜೆಪಿ ಪ್ರಮುಖ ಚುನಾವಣಾ ವಿಷಯವಾಗಿ ಬಳಸಿಕೊಂಡ ಬೆನ್ನಲ್ಲೇ, ನಮ್ಮ ಹೋರಾಟ ದ್ವೇಷ ತುಂಬಿದ ಅಸುರ ಶಕ್ತಿ ವಿರುದ್ಧ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ‘ನಾವು ದ್ವೇಷ ತುಂಬಿದ ರಾಕ್ಷಸ ಶಕ್ತಿ ವಿರುದ್ಧ ಹೋರಾಡುತ್ತಿದ್ದೇವೆ. ನಾನು ಎಲ್ಲೂ ಧಾರ್ಮಿಕ ಶಕ್ತಿಯ ಬಗ್ಗೆ ಮಾತನಾಡಿಲ್ಲ.
ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ಪ್ರಣಾಳಿಕೆ ರೀತಿ ಇದೆ: ಪ್ರಧಾನಿ ಮೋದಿ
ಆದರೆ ಅಧರ್ಮ, ಭ್ರಷ್ಟಾಚಾರ ಮತ್ತು ಸುಳ್ಳಿನ ಶಕ್ತಿಯ ಬಗ್ಗೆ ಮಾತನಾಡಿದ್ದೇನೆ’ ಎಂದು ಮುಂಬೈನಲ್ಲಿ ತಾವು ನೀಡಿದ ಹೇಳಿಕೆ ಸಮರ್ಥಿಸಿಕೊಂಡರು. ಅಲ್ಲದೆ ನನ್ನ ಮಾತುಗಳನ್ನು ಪ್ರಧಾನಿ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿದರು. ಮಾ.19ರಂದು ರಾಹುಲ್ ಗಾಂಧಿ ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ವಿವಾದಾತ್ಮಕ ಹೇಳಿಕೆಗೆ ಪ್ರಧಾನಿ ಮೋದಿ ಕಾಂಗ್ರೆಸ್ ಹಿಂದೂ ಧರ್ಮದ ಶಕ್ತಿಯನ್ನು ಹೊಸಕಿಹಾಲು ಯತ್ನಿಸುತ್ತಿದೆ ಎಂದು ಹೇಳಿದ್ದರು.