ಚುನಾವಣಾ ಬಾಂಡ್ ಅಸಂವಿಧಾನಿಕ, ಯೋಜನೆ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು!
ಚುನಾವಣಾ ಬಾಂಡ್‌ಗಳ ಸಿಂಧುತ್ವದ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದು ರಾಜಕೀಯ ಪಕ್ಷಗಳಿಗೆ ತೀವ್ರ ಹಿನ್ನಡೆ ತಂದಿದೆ. ಪ್ರಮುಖವಾಗಿ ಚುನಾವಣಾ ಬಾಂಡ್ ಯೋಜನೆ ಮಾಹಿತಿ ಹಕ್ಕು ಉಲ್ಲಂಘಿಸುತ್ತದೆ ಎಂದು ಕೋರ್ಟ್ ಹೇಳಿದೆ.
ನವದೆಹಲಿ(ಫೆ.15) ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಚುನಾವಣಾ ಬಾಂಡ್ ಯೋಜನೆ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಕೇಂದ್ರ ಬಿಜೆಪಿಗೆ ತೀವ್ರ ಮುಖಭಂಗ ತಂದಿದೆ. ಚುನಾವಣಾ ಬಾಂಡ್ ಯೋಜನೆ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ. ಇದು ಅಸಂವಿಧಾನಿಕವಾಗಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಚುನಾವಣಾ ಬಾಂಡ್‌ಗಳ ಸಿಂಧುತ್ವದ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲ ಹಾಗೂ ಮನೋಜ್ ಮಿಶ್ರಾ ಒಳಗೊಂಡ ಐವರು ಸದಸ್ಯರ ಪೀಠ ಈ ತೀರ್ಪು ನೀಡಿದೆ. ಈ ತೀರ್ಪು ಇದೀಗ 2018ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಚುನಾವಣಾ ಬಾಂಡ್ ಯೋಜನೆಗೆ ತೀವ್ರ ಹಿನ್ನಡೆ ತಂದಿದೆ.
ದೆಹಲಿ ಹೈಕೋರ್ಟ್ ಜಾಗದಲ್ಲಿ ಆಮ್ ಆದ್ಮಿ ಪಕ್ಷದ ಕಚೇರಿ, ಸುಪ್ರೀಂನಿಂದ ಆಪ್‌ಗೆ ಛೀಮಾರಿ!
ಕಾಂಗ್ರೆಸ್ ನಾಯಕಿ ಜಯಾ ಠಾಕೂರ್, ಸಿಪಿಐ, ಪ್ರಜಾಪ್ರಭುತ್ವ ಸುಧಾರಣೆಗಳ ಎನ್‌ಜಿಒ ಸೇರಿದಂತೆ 4 ಸಂಸ್ಥೆಗಳು ಚುನಾವಣಾ ಬಾಂಡ್‌ಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಪಕ್ಷಗಳಿಗೆ ದೇಣಿಗೆ ನಿಡಿದವರ ಹೆಸರು ಗೌಪ್ಯ ಇಡುವುದು ಉತ್ತಮ ಬೆಳವಣಿಗೆ ಅಲ್ಲ. ಇದರಿಂದ ಕಪ್ಪುಹಣವನ್ನು ಬಿಳಿ ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ಇದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಇತ್ತ ಸರ್ಕಾರ ಗೌಪ್ಯತೆ ಕಾಪಾಡಿಕೊಳ್ಳುವ ಅಗತ್ಯತೆ ಕುರಿತು ವಾದ ಮಂಡಿಸಿತ್ತು.
2023ರ ಅಕ್ಟೋಬರ್‌ನಿಂದ ವಾದ ವಿವಾದಗಳನ್ನು ಸುಪ್ರೀಂ ಕೋರ್ಟ್ ಐವರ ಸದಸ್ಯರ ಪೀಠ ಆಲಿಸಿತ್ತು. ಚುುನಾವಣಾ ಬಾಂಡ್‌ನಲ್ಲಿ ದೇಣಿಗೆ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದು ಜನರ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 29C, ಕಂಪನಿ ಕಾಯ್ದೆ ಸೆಕ್ಷನ್ 183(3), ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 13A(b)ನ ಆರ್ಟಿಕಲ್ 19(1)(a) ಅಡಿಯಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದರಿಂದ ಕಾರ್ಪೋರೇಟ್ ಕಂಪನಿಗಳು, ಇತರ ಉದ್ಯಮಿಗಳು ಸೇರಿದಂತೆ ಹಲವರು ಅನಿಯಮತಿ ಹಣವನ್ನು ದೇಣಿಗೆ ರೂಪದಲ್ಲಿ ನೀಡಿದರೆ ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಯಾಗಲಿದೆ ಎಂದು ಕೋರ್ಟ್ ಹೇಳಿದೆ.
ರೈತರ ಪ್ರತಿಭಟನೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ, ಕ್ರಮಕ್ಕೆ ಆಗ್ರಹಿಸಿದ ಬಾರ್ ಅಸೋಸಿಯೇಷನ್!
ಏನಿದು ಚುನಾವಣಾ ಬಾಂಡ್ ಸ್ಕೀಮ್?
ಚುನಾವಣಾ ಬಾಂಡ್‌ಗಳನ್ನು ಕೇಂದ್ರ ಸರ್ಕಾರ ಜ.2, 2018ರಂದು ಜಾರಿಗೆ ತಂದಿದ್ದು, ಅದರ ಮೂಲಕ ಯಾವುದೇ ವ್ಯಕ್ತಿ/ಸಂಸ್ಥೆ ಭಾರತದ ನೋಂದಾಯಿತ ರಾಜಕೀಯ ಪಕ್ಷಗಳಿಗೆ ಅಧಿಕೃತವಾಗಿ ದೇಣಿಗೆಯನ್ನು ನೀಡಬಹುದಾಗಿದೆ. ದೇಣಿಗೆದಾರರ ಹೆಸರು ಗೌಪ್ಯವಾಗಿರುತ್ತದೆ.