ಆನೆ ಸಾಕುವವರು ಆನೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಸದಾ ಅವುಗಳ ಕಾಳಜಿ ಮಾಡುತ್ತಾರೆ. ಹಾಗೆಯೇ ಇಲ್ಲೊಂದು ಆನೆ ಮರಿ ತನ್ನ ನೋಡಿಕೊಳ್ಳುವವನ ಮೇಲೆ ಬಿದ್ದು ಮುದ್ದಾಟ ಆಡುತ್ತಿದ್ದು, ಅದರ ವಿಡಿಯೋ ವೈರಲ್ ಆಗಿದೆ. 

ಆನೆ ಮರಿಗಳು ನೋಡುವುದಕ್ಕೆನೋ ದೊಡ್ಡ ಗಾತ್ರದಲ್ಲಿ ಕಾಣಿಸಬಹುದು. ಆದರೆ ಹುಟ್ಟುವಾಗ 100 ಕೆಜಿಗೂ ಹೆಚ್ಚು ತೂಗುವ ಈ ಆನೆ ಮರಿಗಳು ಇತರ ಪ್ರಾಣಿಗಳ ಮರಿಗಳಂತೆ ನೋಡಲು ತುಂಬಾ ಮುದ್ದಾಗಿರುತ್ತವೆ. ಜೊತೆಗೆ ಆಟವಾಡಲು ತುಂಬಾ ಇಷ್ಟಪಡುತ್ತವೆ. ತಮ್ಮನ್ನು ಮುದ್ದಿಸುವುದನ್ನು ಅವುಗಳು ಬಹುವಾಗಿ ಇಷ್ಟಪಡುತ್ತವೆ. ಆನೆ ಸಾಕುವವರು ಆನೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಸದಾ ಅವುಗಳ ಕಾಳಜಿ ಮಾಡುತ್ತಾರೆ. ಹಾಗೆಯೇ ಇಲ್ಲೊಂದು ಆನೆ ಮರಿ ತನ್ನ ನೋಡಿಕೊಳ್ಳುವವನ ಮೇಲೆ ಬಿದ್ದು ಮುದ್ದಾಟ ಆಡುತ್ತಿದ್ದು, ಅದರ ವಿಡಿಯೋ ವೈರಲ್ ಆಗಿದೆ. 

ಆನೆಗಳನ್ನು ರಕ್ಷಿಸಲು ಮತ್ತು ಅವರಿಗೆ ಆಶ್ರಯ ನೀಡಲು ಮೀಸಲಾಗಿರುವ ಶೆಲ್ಡ್ರಿಕ್ ವೈಲ್ಡ್‌ಲೈಫ್ ಟ್ರಸ್ಟ್‌ನ ಖಾತೆಯಿಂದ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ಖಾತೆ ಆಗಾಗ ಆನೆ ಮರಿಗಳ ಫೋಟೊ ವಿಡಿಯೋಗಳನ್ನು ಆಗಾಗ ಪೋಸ್ಟ್ ಮಾಡುತ್ತಲೇ ಇರುತ್ತದೆ. ಆನೆ ಮರಿ ಮತ್ತು ಆನೆಗಳನ್ನು ನೋಡಿಕೊಳ್ಳುವ ಜೋಸೆಫ್ ಎಂಬುವವರ ಒಡನಾಟವನ್ನು ಈ ವಿಡಿಯೋ ತೋರಿಸುತ್ತಿದೆ. 

View post on Instagram

ಹೊಂಡಕ್ಕೆ ಬಿದ್ದ ಆನೆಯ ರಕ್ಷಣೆಗೆ ಬಂತು ಜೆಸಿಬಿ : ವಿಡಿಯೋ ವೈರಲ್

ಶೆಲ್ಡ್ರಿಕ್ ವೈಲ್ಡ್‌ಲೈಫ್ ಟ್ರಸ್ಟ್ , ಆನೆ ಹುಟ್ಟಿದಾಗ ಸುಮಾರು 250 ಪೌಂಡ್‌ಗಳಷ್ಟು ತೂಕವಿದ್ದರೂ, ಬೇರೆ ಮಗುವಿನಂತೆ (ಮರಿಗಳಂತೆ) ಸಹಜತೆ ಆತ್ಮೀಯತೆಯನ್ನು ಅವು ಹೇಗೆ ಹಂಚಿಕೊಳ್ಳುತ್ತವೆ ಎಂಬುದರ ಕುರಿತು ಹೇಳಿದ್ದಾರೆ. ಅವರ ಮೂಲಭೂತ ಅವಶ್ಯಕತೆಗಳನ್ನು ಮೀರಿ, ಅವರು ದೈಹಿಕ ಪ್ರೀತಿ ಮತ್ತು ಆತ್ಮೀಯತೆಗೆ ಹಂಬಲಿಸುತ್ತವೆ. ಆನೆ ನೋಡಿಕೊಳ್ಳುವ ಜೋಸೆಫ್, ಈ ಮರಿಗಳನ್ನು ನೋಡಿಕೊಳ್ಳಲು ಮೀಸಲಾಗಿದ್ದಾರೆ ಎಂದು ಈ ವಿಡಿಯೋ ಪೋಸ್ಟ್ ಮಾಡಿ ಬರೆಯಲಾಗಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪುಟ್ಟ ನವಜಾತ ಮಕ್ಕಳ ರಕ್ಷಣೆಯ ವಿಚಾರದಲ್ಲಿ ತಾಯಿ ಹಾಗೂ ಕುಟುಂಬ ಮಾಡುವ ಕಾಳಜಿ ತುಂಬಾ ಜಾಗರೂಕವಾಗಿರುತ್ತದೆ. ಮಗುವಿನ ಸುರಕ್ಷತೆಗೆ ಕುಟುಂಬ ಮೊದಲ ಆದ್ಯತೆ ನೀಡುತ್ತದೆ. ಆದರೆ ಬುದ್ಧಿವಂತ ಪ್ರಾಣಿ ಎನಿಸಿಕೊಂಡಿರುವ ಮನುಷ್ಯ ಇದನ್ನು ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಪ್ರಾಣಿಗಳು ಕೂಡ ಇದೇ ರೀತಿ ತಮ್ಮ ಹಸುಗೂಸುಗಳಿಗೆ ರಕ್ಷಣೆ ನೀಡುತ್ತವೆ ಎಂಬುದು ಅಷ್ಟೇ ಸತ್ಯ. ಇದನ್ನು ಪುಷ್ಠಿಕರಿಸುತ್ತಿದೆ ಆನೆಗಳ ಗುಂಪಿನ ಇತ್ತೀಚಿನ ವಿಡಿಯೋ. 

ಆನೆ ಹಿಂಡನ್ನು ಕೆರಳಿಸಲು ಹೋದ ವಾಹನ ಸವಾರರು: ಆಮೇಲೇನಾಯ್ತು ನೋಡಿ

ಆನೆಗಳು ಕೂಡ ಹೇಳಿ ಕೇಳಿ ಮನುಷ್ಯರಷ್ಟೇ ಬುದ್ಧಿವಂತ ಪ್ರಾಣಿಗಳು. ಹಿಂಡು ಹಿಂಡುಗಳಾಗಿ ಕುಟುಂಬ ಜೀವನವನ್ನು ಆನೆಗಳು ಮಾಡುತ್ತವೆ. ಇವುಗಳು ತಮ್ಮ ನವಜಾತ ಕಂದನ ಸುರಕ್ಷತೆಗೆ ಕೈಗೊಳ್ಳುವ ಕ್ರಮಗಳು ಮಾತ್ರ ನೋಡುಗರನ್ನು ಹುಬ್ಬೇರುವಂತೆ ಮಾಡುತ್ತಿದೆ. ಇವುಗಳು ಮರಿಗಳಿಗೆ ನೀಡುತ್ತಿರುವ ಭದ್ರತೆ ನಮ್ಮ ದೇಶದಲ್ಲಿ ಪ್ರಮುಖ ರಾಜಕಾರಣಿಗಳಿಗೆ ನೀಡುವ z+ ಭದ್ರತೆಯನ್ನು ಮೀರಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. 

ಆನೆಗಳ ಹಿಂಡೊಂದು ಕಾಡಿನ ಮಧ್ಯದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿವೆ. ಈ ವೇಳೆ ಈ ಹಿಂಡಿನಲ್ಲಿ ಪುಟ್ಟದೊಂದು ಮರಿಯೂ ಇದ್ದು, ಇದನ್ನು ಯಾರಿಗೂ ಕಾಣದಂತೆ ಗಜಪಡೆ ಮಧ್ಯದಲ್ಲಿ ಇರಿಸಿಕೊಂಡು ಕರೆದುಕೊಂಡು ಹೋಗುತ್ತಿವೆ. ಹಿಂದೆ ಮುಂದೆ ಸುತ್ತಮುತ್ತ ದೊಡ್ಡ ದೊಡ್ಡ ಆನೆಗಳು ಸಾಗುತ್ತಿದ್ದರೆ ಇವುಗಳ ಮಧ್ಯೆ ಹಿಂಡಿನಲ್ಲಿ ಪುಟ್ಟ ಮರಿಯಾನೆ ಸಾಗುತ್ತಿದೆ. 

ಇದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತ್ ನಂದಾ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಅದು ವೈರಲ್ ಆಗಿದೆ. ಜಗತ್ತಿನಲ್ಲಿ ಯಾರೂ ಕೂಡ ಆನೆ ಹಿಂಡಿನಂತೆ ತನ್ನ ಕಂದನಿಗೆ ಈ ರೀತಿಯ ಭದ್ರತೆ ನೀಡಲು ಸಾಧ್ಯವಿಲ್ಲ. ಇದು ಕೇವಲ ಝೆಡ್‌ ಪ್ಲಸ್ ಭದ್ರತೆ ಅಲ್ಲ. ಇದು z+++ ಭದ್ರತೆ. ಇದು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯಲ್ಲಿರುವ ಸತ್ಯಮಂಗಲ ಅರಣ್ಯದಲ್ಲಿ ಕಂಡು ಬರುವ ದೃಶ್ಯ ಎಂದು ಅವರು ಬರೆದುಕೊಂಡಿದ್ದಾರೆ.