ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ| ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಗೆಳತಿ ವಿ.ಕೆ. ಶಶಿಕಲಾ| ಬೆಂಗಳೂರು ಜೈಲಿಂದ ಜ.27ರಂದು ಶಶಿಕಲಾ ಬಿಡುಗಡೆ: ವಕೀಲ

ಚೆನ್ನೈ(ಜ.20): ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಗೆಳತಿ ವಿ.ಕೆ. ಶಶಿಕಲಾ ಅವರು ಜನವರಿ 27ರಂದು ಬಿಡುಗಡೆ ಆಗಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೈಲಿನಿಂದ ಬಂದ ಮಾಹಿತಿಯನ್ನು ಅನುಸರಿಸಿ ಈ ಮಾಹಿತಿ ನೀಡುತ್ತಿರುವುದಾಗಿ ಅವರ ವಕೀಲ ರಾಜಾ ಸೇತುರಪಾಂಡ್ಯನ್‌ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಶಶಿಕಲಾ ಅವರಿಗೆ 2016ರಲ್ಲಿ 4 ವರ್ಷ ಜೈಲು ಸಜೆ ಆಗಿತ್ತು ಹಾಗೂ 10 ಕೋಟಿ ರು. ದಂಡ ವಿಧಿಸಲಾಗಿತ್ತು. ಅಂದಿನಿಂದ ಅವರು ಪರಪ್ಪನ ಅಗ್ರಹಾರ ಜೈಲುವಾಸಿಯಾಗಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಬೇಸಿಗೆಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಶಶಿಕಲಾ ಬಿಡುಗಡೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆದರೆ ಶಶಿಕಲಾ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಂಗಳವಾರವಷ್ಟೇ ಅಣ್ಣಾ ಡಿಎಂಕೆ ನೇತಾರ ಹಾಗೂ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.