ನವದೆಹಲಿ(ಮೇ.12): ಕೊರೋನಾಕ್ಕೆ ಸ್ವದೇಶಿ ಕೋವ್ಯಾಕ್ಸಿನ್‌ ಲಸಿಕೆ ಅಭಿವೃದ್ಧಿಪಡಿಸಿರುವ ಹೈದ್ರಾಬಾದ್‌ ಮೂಲದ ಭಾರತ್‌ ಬಯೋಟೆಕ್‌ ಸಂಸ್ಥೆ, ಇದೀಗ ಲಸಿಕೆಯನ್ನು ಮಕ್ಕಳ ಮೇಲೂ ಪ್ರಯೋಗಕ್ಕೆ ಒಳಪಡಿಸಲು ನಿರ್ಧರಿಸಿದೆ. ಈ ಕುರಿತು ಅನುಮತಿ ಕೋರಿ ಅದು ಕೇಂದ್ರೀಯ ಔಷಧ ಗುಣಮಟ್ಟನಿಯಂತ್ರಣಾ ಸಂಸ್ಥೆಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಭಾರತ್‌ ಬಯೋಟೆಕ್‌ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೀಘ್ರವೇ ತನ್ನ ನಿರ್ಧಾರವನ್ನು ಪ್ರಕಟಿಸಿದೆ.

ದೇಶದಲ್ಲಿ ಮೂರನೇ ಅಲೆ ವೇಳೆ ಮಕ್ಕಳ ಮೇಲೆ ಸೋಂಕು ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ವರದಿಗಳ ಬೆನ್ನಲ್ಲೇ, ಮಕ್ಕಳಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಹೆಚ್ಚಿನ ವೇಗ ಸಿಕ್ಕಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ ಕೂಡಾ ಮಕ್ಕಳಿಗೂ ಲಸಿಕೆ ನೀಡಿ ಅವರನ್ನು ಮೂರನೇ ಅಲೆಯಿಂದ ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

"

ಉಳಿದಂತೆ 8 ಜಿಲ್ಲೆಯಲ್ಲಿ ಎರಡಂಕಿಯಲ್ಲಿ ಕೋವಿಡ್‌ ಸಾವು ವರದಿಯಾಗಿದೆ. ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಶೇ.1 ಮೀರಿದ ಸಾವಿನ ದರ ದಾಖಲಾಗುತ್ತಿದೆ.

ಈ ಮಧ್ಯೆ ಮೇ 2ರ ಬಳಿಕ ಹೊಸ ಸೋಂಕಿನ ಪ್ರಕರಣ 40 ಸಾವಿರದ ಗಡಿಯೊಳಗೆ ಬಂದಿದೆ. ಆದರೆ ಕೋವಿಡ್‌ ಪರೀಕ್ಷೆಯ ಪ್ರಮಾಣ ಕೂಡ ಸುಮಾರು 30 ರಿಂದ 40 ಸಾವಿರದಷ್ಟುಕಡಿಮೆ ಆಗಿದೆ. ಸೋಮವಾರ 1.24 ಲಕ್ಷ ಕೋವಿಡ್‌ ಪರೀಕ್ಷೆ ನಡೆದಿದೆ. ರಾಜ್ಯದಲ್ಲಿ ಈವರೆಗೆ 19.73 ಲಕ್ಷ ಕೋವಿಡ್‌ ಪ್ರಕರಣ ದಾಖಲಾಗಿದ್ದು 13.83 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,372 ಮಂದಿ ಮರಣವನ್ನಪ್ಪಿದ್ದಾರೆ. ಈವರೆಗೆ ಒಟ್ಟು 2.71 ಕೋಟಿ ಕೋವಿಡ್‌ ಪರೀಕ್ಷೆ ನಡೆದಿದೆ.

"

ಭಾರತ್‌ ಬಯೋಟೆಕ್‌ ಸಂಸ್ಥೆ ತನ್ನ ಕೋವ್ಯಾಕ್ಸಿನ್‌ ಲಸಿಕೆ ಅಭಿವೃದ್ಧಿ ವೇಳೆ, ಎರಡನೇ ಹಂತದ ಕ್ಲಿನಿಕಲ್‌ ಪ್ರಯೋಗದ ಹಂತದಲ್ಲಿ 12ರಿಂದ 65 ವರ್ಷ ವಯಸ್ಸಿನ 380 ಅಭ್ಯರ್ಥಿಗಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಿತ್ತು. ಈ ವೇಳೆ ಲಸಿಕೆ ಅತ್ಯಂತ ಸುರಕ್ಷಿತ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿರುವುದು ಕಂಡುಬಂದಿತ್ತು. ಮೂರನೇ ಹಂತದ ಪರೀಕ್ಷೆಯಲ್ಲಿ ಕೇವಲ ವಯಸ್ಕರ ಮೇಲೆ ಮಾತ್ರ ಲಸಿಕೆ ಪ್ರಯೋಗ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ಸಂಸ್ಥೆ 2ರಿಂದ 12 ವರ್ಷದ ಒಳಗಿನ ಮಕ್ಕಳ ಮೇಲೆ ಪ್ರತ್ಯೇಕವಾಗಿ ಕ್ಲಿನಿಕಲ್‌ ಟ್ರಯಲ್‌ ನಡೆಸಲು ಉದ್ದೇಶಿಸಿದೆ. ಒಂದು ವೇಳೆ ಈ ಪ್ರಯೋಗ ಯಶಸ್ವಿಯಾದರೆ ಭಾರತದಲ್ಲಿ 1ರಿಂದ 18 ವರ್ಷದ ಒಳಗಿನವರಿಗೂ ಲಸಿಕೆ ಲಭ್ಯವಾಗಲಿದೆ.

ಅಮೆರಿಕದಲ್ಲಿ 12ರಿಂದ 15 ವರ್ಷದ ಒಳಗಿನ ಮಕ್ಕಳಿಗೆ ಫೈಝರ್‌ ಸಲಿಕೆಯನ್ನು ನೀಡಲು ಅನುಮತಿ ನೀಡಿದ ಬೆನ್ನಲ್ಲೇ, ಭಾರತದಲ್ಲೂ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆಯನ್ನು ಆರಂಭಿಸಲಾಗಿದೆ. ಸದ್ಯ ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರವೇ ಕೊರೋನಾ ಲಸಿಕೆಯನ್ನು ನೀಡಲಾಗುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona