Fact Check: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಿಳಿದ್ರಾ ಪೊಲೀಸರು?
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಇದೇ ವೇಳೆ ಕರ್ತವ್ಯ ನಿರತ ಪೊಲೀಸರೂ ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ, ಕಾಯ್ದೆ ವಿರುದ್ಧ ಘೋಷಣೆ ಕೂಗಿದ್ದಾರೆ ಎಂಬ ಸಂದೇಶ ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಇದೇ ವೇಳೆ ಕರ್ತವ್ಯ ನಿರತ ಪೊಲೀಸರೂ ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ, ಕಾಯ್ದೆ ವಿರುದ್ಧ ಘೋಷಣೆ ಕೂಗಿದ್ದಾರೆ ಎಂಬ ಸಂದೇಶ ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
Fact Check: ಮೋದಿಗೆ ಕೆಟ್ಟಹೆಸರು ತರಲು ಈರುಳ್ಳಿ ಟ್ರಕ್ ತಡೆದ್ರಾ ಮಮತಾ?
‘ನೋ ಸಿಎಎ, ನೋ ಎನ್‌ಆರ್‌ಸಿ’ ಎಂದು ಬರೆದ ಫಲಕಗಳನ್ನು ಹಿಡಿದ ಪೊಲೀಸರ ಚಿತ್ರವನ್ನು ಪೋಸ್ಟ್ ಮಾಡಿ ಈ ಸುದ್ದಿ ಹರಡಲಾಗುತ್ತಿದೆ. ಆದರೆ ಯಾವ ಸ್ಥಳದಲ್ಲಿ ಪೊಲೀಸರು ಪ್ರತಿರೋಧಿಸಿದ್ದರು ಎಂಬ ಬಗ್ಗೆ ಎಲ್ಲೂ ಮಾಹಿತಿ ಇಲ್ಲ. ಈ ಪೋಸ್ಟ್ ಈಗಾಗಲೇ 2000 ಬಾರಿ ಶೇರ್ ಆಗಿದೆ.
Fact Check: ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಕೀಲರು ಟೋಲ್ ಕಟ್ಟಬೇಕಿಲ್ಲ!
ಆದರೆ ನಿಜಕ್ಕೂ ಪೊಲೀಸರು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರೇ ಎಂದು ಪರಿಶೀಲಿಸಿದಾಗ ಫೋಟೋಶಾಪ್ ಮೂಲಕ ಎಡಿಟ್ ಮಾಡಿ ಈ ರೀತಿ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪೊಲೀಸರು ಇರುವ ಫೋಟೋದೊಂದಿಗೆ ಪೌರತ್ವ ಕಾಯ್ದೆ ವಿರೋಧಿ ಫಲಕಗಳನ್ನು ಸಂಕಲಿಸಿ ಪೊಲೀಸರೂ ಪ್ರತಿಭಟಿಸುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಲಾಗಿದೆ.
ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮೂಲ ಚಿತ್ರ ಪತ್ತೆಯಾಗಿದ್ದು, ಇದೇ ವರ್ಷ ನವೆಂಬರ್‌ನಲ್ಲಿ ದೆಹಲಿಯ ತೇಜ್ ಹಜಾರಿ ನ್ಯಾಯಾಲಯದ ಎದುರು ಪೊಲೀಸರು ಮತ್ತು ನ್ಯಾಯಾಧೀಶರ ನಡುವೆ ವಾಗ್ವಾದ ನಡೆದಿತ್ತು. ಅದಾದ ಬಳಿಕ ಪೊಲೀಸರು ಅದನ್ನು ಖಂಡಿಸಿ ಪ್ರತಿಭಟಿಸಿದ್ದರು. ಆಗಿನ ಚಿತ್ರ ವೈರಲ್ ಆಗಿರುವ ಚಿತ್ರ ಎಂದು ತಿಳಿದುಬಂದಿದೆ. ಪೊಲೀಸರು ಆಗ ಹಿಡಿದಿದ್ದ ಫಲಕಗಳ ಮೇಲೆ ‘ಪೊಲೀಸರೂ ಮನುಷ್ಯರು’ ಎಂದು ಬರೆಯಲಾಗಿತ್ತು. ಇದೇ ಚಿತ್ರವನ್ನು ಎಡಿಟ್ ಮಾಡಿ ಸುಳ್ಳು ಸುದ್ದಿ ಹರಡಲಾಗುತ್ತಿದೆ.
- ವೈರಲ್ ಚೆಕ್