Asianet Suvarna News Asianet Suvarna News

ಫಡ್ನವೀಸ್‌ ಕನಸು ನನಸಾಗುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Fadnavis dream will not come true CM Bommai returns
Author
First Published Nov 23, 2022, 10:58 PM IST

ಬೆಂಗಳೂರು (ನ.23) : ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು (One inch of space) ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ (Sollapura), ಅಕ್ಕಲಕೋಟೆ (Akkalakote) ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ. ಆದರೆ, ಮಹಾರಾಷ್ಟ್ರ (Maharashtra) ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ (Border Dispute) ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು (Legal fight) ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ.‌

ಮಹಾರಾಷ್ಟ್ರ ಗಡಿ ತಂಟೆಗೆ ಸಿಎಂ ಬೊಮ್ಮಾಯಿ ಸಡ್ಡು

ಮರಾಠಿ ಮಾತನಾಡುವ ಪ್ರದೇಶ ಸೇರ್ಪಡೆ: ಗಡಿ ವಿವಾದವನ್ನು ಆರಂಭಿಸಿರುವ ಮಹಾರಾಷ್ಟ್ರದ ನಡೆಯನ್ನು ಖಂಡಿಸಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳು ಕರ್ನಾಟಕದೊಂದಿಗೆ ವಿಲೀನಗೊಳಿಸಲು ಈ ಹಿಂದೆ ನಿರ್ಣಯ ಅಂಗೀಕರಿಸಿದ್ದವು ಎಂಬ ಮಾಹಿತಿಯನ್ನು ನಿನ್ನೆ ತಿಳಿಸಿದ್ದರು. ಆದರೆ, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್‌ (DCM Devendra Fadnavis), ಈ ಗ್ರಾಮಗಳು 2012 ರಲ್ಲಿ ನೀರಿನ ಕೊರತೆಯ (Water Problem) ಸಮಸ್ಯೆಯ ಬಗ್ಗೆ ನಿರ್ಣಯವನ್ನು ಮಂಡಿಸಿದ್ದವು. ಪ್ರಸ್ತುತ, ಯಾವುದೇ ಗ್ರಾಮಗಳು ಕರ್ನಾಟಕ ಸೇರುವ ನಿರ್ಣಯವನ್ನು ಮಂಡಿಸಿಲ್ಲ. ಯಾವುದೇ ಗ್ರಾಮಗಳು ಅಂತಹ (ಕರ್ನಾಟಕದೊಂದಿಗೆ ವಿಲೀನ) ಬೇಡಿಕೆಯನ್ನು ಎತ್ತಿಲ್ಲ. ಆದರೆ, ಗಡಿಯಲ್ಲಿ ಮರಾಠಿ ಮಾತನಾಡುವ (Marathi speaking) ಪ್ರದೇಶಗಳನ್ನು ರಾಜ್ಯಕ್ಕೆ ಸೇರಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಹೇಳುವ ಮೂಲಕ ಗಡಿ ವಿವಾದವನ್ನು ಮುನ್ನೆಲೆಗೆ ತಳ್ಳುತ್ತಿದ್ದಾರೆ.

ಗಡಿ ವಿವಾದಕ್ಕೆ ಮತ್ತೆ ಮಹಾರಾಷ್ಟ್ರದ ಕಿಚ್ಚು: ನಿಗಾಕ್ಕೆ ಇಬ್ಬರು ಸಚಿವರ ನೇಮಕ!

ರಾಜಕೀಯ ಲೆಕ್ಕಾಚಾರ: ಪ್ರತಿ ಬಾರಿ ಮಹಾರಾಷ್ಟ್ರದಲ್ಲಿ ಚುನಾವಣೆ (Election) ನಡೆಯುವಾಗಲೂ ಎಲ್ಲ ಪಕ್ಷಗಳು ಗಡಿಯ ವಿಚಾರವಾಗಿ ಜನರಿಗೆ ಏನಾದರೂ ಒಂದು ಹೇಳಿಕೆ ಕೊಟ್ಟು ಮತಗಳನ್ನು ಪಡೆಯುವ ಅಜೆಂಡಾ ಮಾಡಿಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಕೂಡ ಇದೇ ಮಾತನ್ನು ಹೇಳಿದ್ದರು. ಇನ್ನು ಇತ್ತೀಚೆಗೆ ಮುಖ್ಯಮಂತ್ರಿ ಆಗಿರುವ ಏಕನಾಥ್‌ ಶಿಂಧೆ (Ekanath Shindhe) ಕೂಡ ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವನ್ನು ಮುಂದಿಟ್ಟುಕೊಂಡೇ ಸಿಎಂ ಖುರ್ಚಿ ಗಿಟ್ಟಿಸಿದ್ದಾರೆ. ಇನ್ನು ಶಿಂಧೆ ಗಡಿ ಗಲಾಟೆಯಿಂದಲೇ ನಾಯಕನಾಗಿ ಗುರುತಿಸಿಕೊಂಡು ರಾಜಕೀಯದಲ್ಲಿ ಗಟ್ಟಿಯಾಗಿ ನೆಲೆಯೂರಿದ್ದಾರೆ. ಹೀಗಾಗಿ, ಗಡಿ ವಿವಾದವನ್ನು ಸುಪ್ರೀಂ ಕೋರ್ಟವರೆಗೆ ತೆಗೆದುಕೊಂಡು ಹೋಗಿದ್ದಾರೆ. 

Follow Us:
Download App:
  • android
  • ios