ದಿಲ್ಲಿ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ನವದೆಹಲಿ (ಫೆ.06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಶನಿವಾರ ‘ಚಕ್ಕಾ ಜಾಮ್’ಗೆ ಕರೆಕೊಟ್ಟಹಿನ್ನೆಲೆಯಲ್ಲಿ ದೆಹಲಿ ಗಡಿಗಳಲ್ಲಿ ಭಾರೀ ಸಂಖ್ಯೆಯ ಪೊಲೀಸ್ ಪಡೆ ನಿಯೋಜಿಸಿ, ಬಿಗಿ ಬಂದೋಬಸ್‌್ತ ಕೈಗೊಳ್ಳಲಾಗಿದೆ. ಗಾಜಿಪುರ, ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಉತ್ತರ ಜಿಲ್ಲೆಗಳ ಗಡಿಗಳ ರಸ್ತೆಗೆ ಅಡ್ಡಲಾಗಿ ಹಲವು ಹಂತದ ಬ್ಯಾರಿಕೇಡ್, ಮುಳ್ಳು ತಂತಿಗಳನ್ನು ಅಳವಡಿಸಲಾಗಿದೆ. ಮತ್ತು ರಸ್ತೆಗೆ ಮೊಳೆ ಹೊಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"
ಜ.26ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.
ದೇಶಾದ್ಯಂತ ರೈತರ ಚಕ್ಕಾ ಜಾಮ್; ಫೆ.6ರ ಪ್ರತಿಭಟನೆ ಸಮಯ, ಸ್ಥಳ, ಸಂಪೂರ್ಣ ಮಾಹಿತಿ! ...
ರಸ್ತೆ ತಡೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆದಿದ್ದು, ಭಾರೀ ಭದ್ರತೆಗೆ ಕೇಂದ್ರ ಸರ್ಕಾರವೇ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 6, 2021, 9:21 AM IST