Asianet Suvarna News Asianet Suvarna News

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ಜಡ್ಜ್‌ ಫಾತಿಮಾ ಬೀವಿ ನಿಧನ

ಜಸ್ಟಿಸ್ ಬೀವಿ ಅವರು ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾದ ಮೊದಲ ಮಹಿಳೆ ಎನಿಸಿದ್ದರು. 
 

Fathima Beevi First woman judge of Supreme Court Justice passes away san
Author
First Published Nov 23, 2023, 1:30 PM IST

ತಿರುವನಂತಪುರಂ (ನ.23): ಸುಪ್ರೀಂ ಕೋರ್ಟ್‌ ಮಾಜಿ ಜಡ್ಜ್‌  ಫಾತೀಮಾ ಬೀವಿ ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು ಎಂದು ಏಷ್ಯಾನೆಟ್‌ ನ್ಯೂಸ್‌ ಮಲಯಾಳಂ ವರದಿ ಮಾಡಿದೆ. ಫಾತಿಮಾ ಬೀವಿ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು 1997-2001ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು. ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಆಗಿದ್ದರು. 1927 ರಲ್ಲಿ ಕೇರಳದಲ್ಲಿ ಜನಿಸಿದ್ದ ಫಾತೀಮಾ ಬೀವಿಗೆ ಅವರ ತಂದೆ ಕಾನೂನು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದ್ದರು. 1950 ರಲ್ಲಿ, ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಇವರು,  ಬಾರ್ ಕೌನ್ಸಿಲ್ ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆ ಎನಿಸಿಕೊಂಡಿದ್ದರು. ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದ ಫಾತೀಮಾ ಬೀವಿ, 1974 ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980 ರಲ್ಲಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸೇವೆ ಸಲ್ಲಿಸಿ 1983 ರಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

1989ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ಮಹಿಳಾ ಜಡ್ಜ್‌ ಎನ್ನುವ ಶ್ರೇಯಕ್ಕೆ ಪಾತ್ರರಾದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು ಉನ್ನತ ನ್ಯಾಯಾಂಗದಲ್ಲಿ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾದ ಮೊದಲ ಮಹಿಳೆ ಎನಿಸಿಕೊಂಡಿದ್ದರು. 1993 ರಲ್ಲಿ ನಿವೃತ್ತರಾದ ನಂತರ, ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ನಂತರ ತಮಿಳುನಾಡಿನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಖೈದಿಗಳು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ತಮಿಳುನಾಡು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.

ಅಲೋಪತಿ ಬಗ್ಗೆ ಅಪಪ್ರಚಾರ ಮಾಡಿಲ್ಲ, ಕೋರ್ಟಿಗೆ ಪತಂಜಲಿ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡುವೆ: ರಾಮದೇವ್‌

ಅಂದು ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಜಯಲಲಿತಾ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ನಾಮಪತ್ರ ನಿರಾಕರಣೆಯಾದರೂ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷಗಳ ಪ್ರತಿಭಟನೆಯನ್ನು ಪರಿಗಣಿಸಿ, ಕೇಂದ್ರವು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿತು, ಆದರೆ ಅದಕ್ಕೂ ಮೊದಲು ಅವರು ರಾಜ್ಯಪಾಲರ ಸ್ಥಾನಕ್ಕೆ ಇವರು ರಾಜೀನಾಮೆ  ನೀಡಿದ್ದರು.

ಪ್ರಯಾಣಿಕರಿಗೆ ಸೌಲಭ್ಯ ನೀಡದ ಹಿನ್ನೆಲೆ: ಡಿಜಿಸಿಎನಿಂದ ಏರ್‌ ಇಂಡಿಯಾಗೆ 10 ಲಕ್ಷ ರು. ದಂಡ

Latest Videos
Follow Us:
Download App:
  • android
  • ios