ಭಾರತದ ಪ್ರಧಾನಿ ಹೇಡಿ; ನನ್ನ ವಿರುದ್ಧವೂ ಕೇಸು ದಾಖಲಿಸಿ, ನನ್ನನ್ನೂ ಜೈಲಿಗೆ ಹಾಕಿ: ಪ್ರಿಯಾಂಕಾ ಗಾಂಧಿ ಆಕ್ರೋಶ
ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ, ನೆಹರು-ಗಾಂಧಿ ಕುಟುಂಬವನ್ನು ಸಹ ಬಿಡದೆ ಬಿಜೆಪಿ ಪ್ರತಿದಿನ ರಾಹುಲ್‌ನನ್ನು ಅವಮಾನಿಸುತ್ತಿದೆ ಎಂದು ಹೇಳಿದರು.
ನವದೆಹಲಿ (ಮಾರ್ಚ್ 26, 2023): ರಾಹುಲ್ ಗಾಂಧಿ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಇಂದು ಗಾಂಧಿ ಪ್ರತಿಮೆಗಳ ಮುಂದೆ ಸಂಕಲ್ಪ ಸತ್ಯಾಗ್ರಹ ನಡೆಸುತ್ತಿದೆ. ಇದೇ ರೀತಿ, ದೆಹಲಿಯ ರಾಜ್‌ಘಾಟ್‌ನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ನನ್ನ ವಿರುದ್ಧ ಕೇಸು ದಾಖಲಿಸಿ, ನನ್ನನ್ನು ಜೈಲಿಗೆ ಹಾಕಿ, ಆದರೆ ಭಾರತದ ಪ್ರಧಾನಿ ಒಬ್ಬ ಹೇಡಿ" ಎಂದು ಪ್ರಿಯಾಂಕಾ ಗಾಂಧಿ ಗಾಂಧಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರೂ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಅವರು ಪ್ರಸ್ತುತ ರಾಹುಲ್ ಗಾಂಧಿಯ ಅನರ್ಹತೆಯ ವಿರುದ್ಧ ಒಂದು ದಿನದ ಸತ್ಯಾಗ್ರಹ ಮಾಡುತ್ತಿದ್ದಾರೆ.
ಗಾಂಧಿ ಕುಟುಂಬದ ವಿರುದ್ಧ ಬಿಜೆಪಿಯ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿದ್ದಾರೆ ಮತ್ತು ಅವರ ಕಾಶ್ಮೀರಿ ಪಂಡಿತ ವಂಶಾವಳಿಯನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ತಮ್ಮ ಆರೋಪಿಯನ್ನು ಹೆಚ್ಚಿಸಿದೆ.
ಇದನ್ನು ಓದಿ: Rahul Gandhi Disqualification: ಕೈ ಪ್ರತಿಭಟನೆಯಲ್ಲಿ ಜಗದೀಶ್ ಟೈಟ್ಲರ್ ಭಾಗಿ; ಗಾಂಧಿಗೆ ಅವಮಾನ ಎಂದು ನೆಟ್ಟಿಗರ ಟೀಕೆ
ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ, ನೆಹರು-ಗಾಂಧಿ ಕುಟುಂಬವನ್ನು ಸಹ ಬಿಡದೆ ಬಿಜೆಪಿ ಪ್ರತಿದಿನ ರಾಹುಲ್‌ನನ್ನು ಅವಮಾನಿಸುತ್ತಿದೆ ಎಂದು ಹೇಳಿದರು. ರಾಹುಲ್ ಗಾಂಧಿಯನ್ನು ಲೋಕಸಭೆ ಸಂಸತ್ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಸಂಕಲ್ಪ ಸತ್ಯಾಗ್ರಹ ವೇಳೆ ಕಾಂಗ್ರೆಸ್ ಈ ಆರೋಪ ಮಾಡಿದೆ. ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪ್ರತಿಭಟನೆಯ ಮನವಿಯನ್ನು ಪೊಲೀಸರು ತಿರಸ್ಕರಿಸಿದ ನಂತರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯ ರಾಜ್ ಘಾಟ್‌ನ ಹೊರಗೆ “ಸತ್ಯಾಗ್ರಹ” ನಡೆಸಿದರು.
ಈ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ “ನನ್ನ ಸಹೋದರನನ್ನು ಹುತಾತ್ಮನ ಮಗ, ದೇಶದ್ರೋಹಿ ಮತ್ತು ಮೀರ್ ಜಾಫರ್ ಎಂದು ಕರೆಯುತ್ತೀರಿ, ನೀವು ಅವರ ತಾಯಿಯನ್ನು ಅವಮಾನಿಸುತ್ತೀರಿ. ನಿಮ್ಮ ಮುಖ್ಯಮಂತ್ರಿ ರಾಹುಲ್ ಗಾಂಧಿಗೆ ಅವರ ತಾಯಿ ಯಾರೆಂದು ಗೊತ್ತಿಲ್ಲ ಎಂದು ಹೇಳುತ್ತಾರೆ. ಹೀಗೆ, ನೀವು ನನ್ನ ಕುಟುಂಬವನ್ನು ಪ್ರತಿದಿನ ಅವಮಾನಿಸುತ್ತೀರಿ. ಆದರೆ ಯಾವುದೇ ಪ್ರಕರಣಗಳನ್ನು ದಾಖಲಿಸುವುದಿಲ್ಲ’’ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಗೆದ್ದು ರಾಹುಲ್ ಅನರ್ಹತೆಗೆ ಉತ್ತರ ನೀಡೋಣ: ಸಾಮೂಹಿಕ ರಾಜೀನಾಮೆಗೆ ಮುಂದಾದ ಸಂಸದರಿಗೆ ಪ್ರಿಯಾಂಕಾ ಸಲಹೆ
ಅಲ್ಲದೆ, "ನಿಮ್ಮ ಪ್ರಧಾನಿ, ಜನರಿಂದ ತುಂಬಿರುವ ಸಂಸತ್ತಿನಲ್ಲಿ, 'ಈ ಕುಟುಂಬ ನೆಹರೂ ಹೆಸರನ್ನು ಏಕೆ ಬಳಸುವುದಿಲ್ಲ' ಎಂದು ಹೇಳುತ್ತಾರೆ. ಅವರು ಇಡೀ ಕಾಶ್ಮೀರಿ ಪಂಡಿತರ ಕುಟುಂಬವನ್ನು ಅವಮಾನಿಸುತ್ತಾರೆ ಮತ್ತು ತಂದೆಯ ಸಾವಿನ ನಂತರ ಕುಟುಂಬದ ಹೆಸರನ್ನು ಮುಂದಕ್ಕೆ ಸಾಗಿಸುವ ಮಗನ ಸಂಪ್ರದಾಯವನ್ನು ಅವಮಾನಿಸುತ್ತಾರೆ’’ ಎಂದೂ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
ಮಾನನಷ್ಟ ಅಪರಾಧ ಮತ್ತು ಸಂಸತ್ತಿನ ಅನರ್ಹತೆಗೆ ಕಾರಣವಾದ ರಾಹುಲ್ ಗಾಂಧಿಯ ಹೇಳಿಕೆಯನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನಗಳನ್ನು ವಿರೋಧಿಸಿದ ಮಲ್ಲಿಕಾರ್ಜುನ ಖರ್ಗೆ, "ನೀರವ್ ಮೋದಿ ಒಬಿಸಿಯೇ? ಮೆಹುಲ್ ಚೋಕ್ಸಿ ಒಬಿಸಿಯೇ? ಲಲಿತ್ ಮೋದಿ ಒಬಿಸಿಯೇ?? ಅವರು ಪರಾರಿಯಾಗಿದ್ದಾರೆ’’ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕೈ ನಾಯಕನಿಗೆ ಶಾಕ್: ರಾಹುಲ್ ಗಾಂಧಿ ಮನೆಗೆ ದೌಡಾಯಿಸಿದ ದೆಹಲಿ ಪೊಲೀಸರು..!
"ಕಪ್ಪುಹಣದೊಂದಿಗೆ ಪಲಾಯನ ಮಾಡುತ್ತಿರುವ ಇವರ ವಿರುದ್ಧ ಮಾತ್ರ ರಾಹುಲ್ ಗಾಂಧಿ ಅವರು ಪ್ರಸ್ತಾಪಿಸಿದರು. ಕಾಂಗ್ರೆಸ್ ದೇಶಾದ್ಯಂತ ಇಂತಹ ನೂರಾರು ಪ್ರತಿಭಟನೆಗಳನ್ನು ನಡೆಸುತ್ತದೆ. ನಾವು ವಾಕ್ ಸ್ವಾತಂತ್ರ್ಯವನ್ನು ಕಾಪಾಡಲು ಹೋರಾಡುತ್ತೇವೆ. ರಾಹುಲ್ ಗಾಂಧಿಯವರೊಂದಿಗೆ ನಿಂತಿದ್ದಕ್ಕಾಗಿ ನಾನು ಎಲ್ಲಾ ವಿರೋಧ ಪಕ್ಷಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ" ಎಂದೂ ಮಲ್ಲಿಕಾರ್ಜುನ ಖರ್ಗೆ ಹೇಳಿದರು.