: ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಾಮ್‌ ಟುಕಿ ಅವರ ವಿರುದ್ಧ  FIR ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಎಫ್‌ಐಆರ್‌ ದಾಖಲಿಸಿದೆ.   ಬೌಂಡರಿ ನಿರ್ಮಾಣ ಕಾಮಗಾರಿಯ ಗುತ್ತಿಗೆ ವಿಚಾರದಲ್ಲಿ ಕೇಳಿಬಂದ ಭ್ರಷ್ಟಾಚಾರ ಆರೋಪ

ನವದೆಹಲಿ (ಜೂ.11): ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಾಮ್‌ ಟುಕಿ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಎಫ್‌ಐಆರ್‌ ದಾಖಲಿಸಿದೆ.

ಸ್ವಜನಪಕ್ಷಪಾತ ಮತ್ತು ಕೋಲ್ಕತಾದ ಸಾಲ್ಟ್‌ ಲೇಕ್‌ ಪ್ರದೇಶದಲ್ಲಿರುವ ಕೇಂದ್ರೀಯ ವಿದ್ಯಾಲಯ ಶಾಲೆಯ ಬೌಂಡರಿ ನಿರ್ಮಾಣ ಕಾಮಗಾರಿಯ ಗುತ್ತಿಗೆ ವಿಚಾರದಲ್ಲಿ ಕೇಳಿಬಂದ ಭ್ರಷ್ಟಾಚಾರ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದೆ' ...

ಟೆಂಡರ್‌ ಕರೆಯದೇ ಟುಕಿ ಅವರ ಸಂಬಂಧಿಕರಿಗೆ ಈ ಗುತ್ತಿಗೆ ನೀಡಲಾಗಿದೆ ಎಂಬ ಆರೋಪದ ಮೇಲೆ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸಲಾಗಿದೆ.

ಇದರಿಂದ ಮಾಜಿ ಸಿಎಂ ನಬಾಮ್ ಟುಕಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.