Asianet Suvarna News Asianet Suvarna News

ಮಕ್ಕಳ ಆಸ್ಪತ್ರೆಗೆ ಬೆಂಕಿ: 13 ಕಂದಮ್ಮಗಳ ರಕ್ಷಣೆ, ಶಿಶುಗಳನ್ನು ಎತ್ತಿಕೊಂಡು ಓಡಿದ ಪೋಷಕರು

ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, 13 ನವಜಾತ ಶಿಶುಗಳು ಸೇರಿದಂತೆ 60 ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದೆ. ಅಹ್ಮದಾಬಾದ್‌ನಲ್ಲಿರುವ ಪರಿಮಳ ಗಾರ್ಡನ್‌ನಲ್ಲಿರುವ ದೇವ ಕಾಂಪ್ಲೆಕ್ಸ್‌ನಲ್ಲಿ ಈ ಅನಾಹುತ ಸಂಭವಿಸಿದೆ.

Fire breaks out at ahmedabad dev complex hospital akb
Author
Bangalore, First Published Jun 25, 2022, 5:19 PM IST

ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, 13 ನವಜಾತ ಶಿಶುಗಳು ಸೇರಿದಂತೆ 60 ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದೆ. ಅಹ್ಮದಾಬಾದ್‌ನಲ್ಲಿರುವ ಪರಿಮಳ ಗಾರ್ಡನ್‌ನಲ್ಲಿರುವ ದೇವ ಕಾಂಪ್ಲೆಕ್ಸ್‌ನಲ್ಲಿ ಈ ಅನಾಹುತ ಸಂಭವಿಸಿದೆ. 

ಈ ಕಟ್ಟಡದಲ್ಲಿ ಮಕ್ಕಳ ಆಸ್ಪತ್ರೆ ಇರುವುದರಿಂದ ಆಸ್ಪತ್ರೆಗೆ ದಾಖಲಾಗುವ ನವಜಾತ ಶಿಶುಗಳು ಸೇರಿದಂತೆ ಅನೇಕರ ಜನರ ಪ್ರಾಣಕ್ಕೆ ಅಪಾಯ ಎದುರಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ  ಕೂಡಲೇ ಸ್ಥಳಕ್ಕೆ ಆಗಮಿಸಿ 13 ನವಜಾತ ಶಿಶುಗಳು ಸೇರಿದಂತೆ 60 ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಇದುವರೆಗೂ ಜೀವಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬುದು ಸಮಾಧಾನದ ಸಂಗತಿ.

Tata Nexon EV ಹೊತ್ತಿ ಉರಿದ ಟಾಟಾ ನೆಕ್ಸಾನ್, ಸುರಕ್ಷಿತ ಕಾರಿನಲ್ಲಿ ಮೊದಲ ಬೆಂಕಿ ಪ್ರಕರಣ ತನಿಖೆಗೆ ಆದೇಶ!
 

ಪ್ರಸ್ತುತ ಸಿಕ್ಕಿರುವ ಮಾಹಿತಿಯ ಪ್ರಕಾರ, ಪರಿಮಳ್ ಗಾರ್ಡನ್ ಬಳಿಯ ಇರುವ ದೇವ್ ಕಾಂಪ್ಲೆಕ್ಸ್‌ನಲ್ಲಿರುವ ಸರ್ವರ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಈ ಕಟ್ಟಡದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿರುವ ಮಕ್ಕಳ ಪ್ರಾಣಕ್ಕೆ ಅಪಾಯ ತಂದೊಡ್ಡಿದೆ. ಬೆಂಕಿ ಅವಘಡದ ನಂತರ, ಜನರು ತಮ್ಮ ಕೈಯಲ್ಲಿ ನವಜಾತ ಶಿಶುಗಳನ್ನು ಹಿಡಿದುಕೊಂಡು ಓಡುತ್ತಿರುವುದು ಕಂಡು ಬಂದಿದೆ. 

 

ಈ ಕಟ್ಟಡದಲ್ಲಿ ಮಕ್ಕಳ ಆಸ್ಪತ್ರೆ ಮಾತ್ರವಲ್ಲದೇ ಬೇರೆ ಆಸ್ಪತ್ರೆಯೂ ಇರುವುದರಿಂದ ಬೆಂಕಿ ಅನಾಹುತದಿಂದಾಗಿ ಭಾರಿ ಆತಂಕ ಎದುರಾಗಿದೆ. ಬೆಂಕಿ ಹೊತ್ತಿಕೊಂಡ ನಂತರ ಹೊಗೆ ಹೊರಬಿದ್ದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಸ್ಥಳದತ್ತ ಜಮಾಯಿಸಿದ್ದರು. ಅಲ್ಲದೇ ಅದೇ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕಟ್ಟಡದಲ್ಲಿ ವಾಸಿಸುತ್ತಿದ್ದವರು ಪ್ರಾಣ ಉಳಿಸಿಕೊಳ್ಳಲು ಛಾವಣಿಗೆ ಓಡಿ ಬಂದಿದ್ದಾರೆ. 

ಸೂರತ್‌ನಲ್ಲಿ ಅಗ್ನಿ ಅವಘಡ: ಪ್ರಾಣ ಉಳಿಸಿಕೊಳ್ಳಲು 5ನೇ ಮಹಡಿಯಿಂದ ಹಾರಿದ ಕಾರ್ಮಿಕರು!
 

ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕ್ರೇನ್‌ ಮೂಲಕ ಕಟ್ಟಡದಲ್ಲಿದ್ದ ಜನರನ್ನು ರಕ್ಷಿಸುವ ಕಾರ್ಯ ಮಾಡಿದರು. ಒಟ್ಟು ಸ್ಥಳದಿಂದ 13 ಮಕ್ಕಳು ಸೇರಿದಂತೆ 60 ಮಂದಿಯನ್ನು ರಕ್ಷಿಸಲಾಗಿದೆ.

ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ 

ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಕಟ್ಟಡದ ಮೂರನೇ ಮಹಡಿಯಲ್ಲಿರುವ ಕಂಪನಿಯ ಸರ್ವರ್ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದು ನಂತರ ಭೀಕರ ಸ್ವರೂಪವನ್ನು ಪಡೆದುಕೊಂಡಿತು. ರಕ್ಷಣಾ ಕಾರ್ಯ ನಡೆಸುತ್ತಿದ್ದಾಗಲೇ ಅಗ್ನಿಶಾಮಕ ದಳದವರು 500 ಮೀಟರ್‌ವರೆಗೆ ರಸ್ತೆಯನ್ನು ಬಂದ್ ಮಾಡಿದ್ದಾರೆ. ಇದಲ್ಲದೇ 2 ಲಿಫ್ಟ್‌ಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಬೆಂಕಿ ನಂದಿಸಲು ಸುಮಾರು 10 ಅಗ್ನಿಶಾಮಕ ವಾಹನಗಳನ್ನು ಬಳಸಲಾಗಿದೆ. ಇಲ್ಲಿಯವರೆಗೆ ಬೆಂಕಿಯಿಂದ ಆಗಿರುವ ಹಾನಿ ಎಷ್ಟು? ಈ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
 

Follow Us:
Download App:
  • android
  • ios