ಡೆಹ್ರಡೂನ್-ದೆಹಲಿ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಪ್ರಯಾಣಿಕರೆಲ್ಲರು ಸೇಫ್ ಅನ್ನೋ ಮಾಹಿತಿ ಲಭ್ಯವಾಗಿದೆ.

ನವದೆಹಲಿ(ಮಾ.13): ಡೆಹ್ರಡೂನ್-ದೆಹಲಿ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ C5 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಪರಿಣಾಮ ಸಂಪೂರ್ಣ ಬೋಗಿ ಸುಟ್ಟು ಭಸ್ಮಗೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ C5 ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಇತರ ಬೋಗಿಗೆ ಸ್ಥಳಾಂತರ ಮಾಡಲಾಗಿದೆ. ಈ ಮೂಲಕ 35 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಗತ್ತಿನ ಅತಿ ಎತ್ತರದ ರೈಲ್ವೆ ಬ್ರಿಡ್ಜ್: ಎಂಜಿನಿಯರಿಂಗ್ ಮೈಲುಗಲ್ಲು ಎಂದ ಸಚಿವ

ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ರೈಲಿನಿಂದ C5 ಬೋಗಿಯನ್ನು ಬೇರ್ಪಡಿಸಲಾಯಿತು. ಹೀಗಾಗಿ ಇನ್ನು ಈ ಬೋಗಿಯಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ ಇತರ ಬೋಗಿಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ C5 ಬೋಗಿ ಮಾತ್ರ ಹೊತ್ತಿ ಉರಿದಿದೆ. ಇತರ ಬೋಗಿಗಳು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದೆ ಎಂದು ರೈಲ್ವೇ ಸಿಬ್ಬಂಧಿಗಳು ಹೇಳಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಉತ್ತರಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.