ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,  ವಾರ್ಡ್‌ನಿಂದ  ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್‌ನಿಂದ ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ. ಮಧ್ಯಾಹ್ನ 11.45ಕ್ಕೆ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಆರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. ಎಂಡೋಸ್ಕೋಪಿ ನಡೆಸುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಎಮರ್ಜೆನ್ಸಿ ವಾರ್ಡ್ ಸಮೀಪದಲ್ಲೇ ಇತ್ತು. ಹೀಗಾಗಿ ಭಾರಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಯ್ತು. ಜೊತೆಗೆ ಬೆಂಕಿ ನಂದಿಸಲಾಯ್ತು. ಯಾವ ಕಾರಣದಿಂದ ಬೆಂಕಿ ಸಂಭವಿಸಿದೆ ಎಂಬ ಬಗ್ಗೆ ತಿಳಿದು ಬಂದಿಲ್ಲ. ಆದರೆ ಕಟ್ಟಡದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಕೆಲ ಮಾಧ್ಯಮಗಳ ವರದಿ ಪ್ರಕಾರ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. 

Scroll to load tweet…

ಇರಾಕ್‌ನಲ್ಲಿ ಆಸ್ಪತ್ರೆಯಲ್ಲಿ ಸಂಭವಿಸಿತ್ತು ದುರಂತ

2021ರಲ್ಲಿ ಇರಾಕ್‌ನ ನಸ್ಸೀರಿಯಾದಲ್ಲಿ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದರು. ಆಕ್ಸಿಜನ್ ಟ್ಯಾಂಕ್‌ ಸ್ಪೊಟಗೊಂಡ ಪರಿಣಾಮ ಈ ದುರಂತ ಸಂಭವಿಸಿತ್ತು. ಕೋವಿಡ್‌ ವಾರ್ಡ್‌ನಲ್ಲಿದ್ದ ಆಕ್ಸಿಜನ್ ಟ್ಯಾಂಕ್‌ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು.