ತಾಂತ್ರಿಕ ದೋಷ ಕಂಡುಬಂದು ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು  ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆದ ಘಟನೆ ಭಾನುವಾರ ನಡೆದಿದೆ. 

ಪಾಟ್ನಾ (ಜೂನ್ 19): ತಾಂತ್ರಿಕ ದೋಷ ಕಂಡುಬಂದು ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾದ ಬಿಹ್ತಾ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ತುರ್ತು ಲ್ಯಾಂಡಿಂಗ್ ಆದ ಘಟನೆ ಭಾನುವಾರ ನಡೆದಿದೆ. 

ವಿಮಾನ ಟೇಕಾಫ್ ಆದ ಕೂಡಲೇ ವಿಮಾನದ ಎಡ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡಿತು. ಸಿಬ್ಬಂದಿ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಪಾಟ್ನಾ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ವ್ಯವಸ್ಥೆ ಮಾಡಿದರು. ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದ್ದು, ಭಾರೀ ದುರಂತ ತಪ್ಪಿದಂತಾಗಿದೆ. ಇದು ಬೋಯಿಂಗ್ 727 ವಿಮಾನ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

Scroll to load tweet…

TEXTBOOK REVISION COMMITTEEಯ ಮತ್ತೊಂದು ಎಡವಟ್ಟು ಬಹಿರಂಗ

ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಕಾರಣವಿನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಮತ್ತು ಯಾವುದೇ ಗಾಯದ ಬಗ್ಗೆ ವರದಿಯಾಗಿಲ್ಲ.

Scroll to load tweet…

ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ಅವರು ಮಾತನಾಡಿ "ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸ್ಥಳೀಯರು ಮತ್ತು ಜಿಲ್ಲಾ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ದೆಹಲಿಗೆ ಹೊರಟಿದ್ದ ವಿಮಾನವು ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ಎಲ್ಲಾ 185 ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ. ಮೇಲ್ಮೋಟಕ್ಕೆ ತಾಂತ್ರಿಕ ದೋಷ ಕಂಡುಬಂದಿದೆ. ಎಂಜಿನಿಯರಿಂಗ್ ತಂಡವು ನಿಖರ ಕಾರಣವನ್ನು ವಿಶ್ಲೇಷಿಸುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.