ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ವೇಳೆ ಮೋದಿ ಸೇರಿ ಐವರಿಗೆ ಗರ್ಭಗುಡಿಯಲ್ಲಿ ಅವಕಾಶ
ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ, ದೇಗುಲದಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಜ.22ರ ಪ್ರಾಣ ಪ್ರತಿಷ್ಠಾಪನೆ ವೇಳೆ ಗರ್ಭಗುಡಿಯಲ್ಲಿ ಕೇವಲ 5 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆ: ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ, ದೇಗುಲದಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಜ.22ರ ಪ್ರಾಣ ಪ್ರತಿಷ್ಠಾಪನೆ ವೇಳೆ ಗರ್ಭಗುಡಿಯಲ್ಲಿ ಕೇವಲ 5 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಅವರಿಗೆ ಅವಕಾಶ ಕಲ್ಪಿಸಲಾಗುವುದು. ಆ ಸಮಯದಲ್ಲಿ ಗರ್ಭಗುಡಿಯನ್ನು ಸಾರ್ವಜನಿಕವಾಗಿ ಮುಚ್ಚಿದ್ದು, ಶ್ರೀರಾಮನ ಮೂರ್ತಿಗೆ ಶಾಸ್ತ್ರೋಕ್ತವಾಗಿ ಕನ್ನಡಿಯಲ್ಲಿ ಮೊದಲಿಗೆ ಪ್ರತಿಬಿಂಬ ತೋರಿಸಿ ಅನಾವರಣ ಮಾಡಲಾಗುವುದು. ಗರ್ಭಗುಡಿಯ ಬಾಗಿಲುಗಳಿಗೆ ಬಂಗಾರ ಲೇಪನ ಮಾಡಲಾಗಿದ್ದು, ಗರ್ಭಗುಡಿಯ ಸುತ್ತಲೂ ಶ್ರೀರಾಮನ ಅಣಿಮುತ್ತುಗಳುಳ್ಳ ಭಿತ್ತಿಪತ್ರಗಳನ್ನು ಕಂಚಿನ ಎಲೆಗಳಲ್ಲಿ ಕೆತ್ತನೆ ಮಾಡಿ ಗೋಡೆಗೆ ಅಂಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆಯಲ್ಲಿ ಮದ್ಯ, ಮಾಂಸದಂಗಡಿಗೆ ನಿಷೇಧ
ರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿರುವ ನಡುವೆಯೇ ಅಯೋಧ್ಯೆಯ ಬಹುತೇಕ ಪ್ರದೇಶಗಳಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. 22 ರಂದು ಮಂದಿರದ ಮೊದಲ ಹಂತ ಉದ್ಘಾಟನೆಯಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಆದೇಶ ಹೊರಡಿಸಿದ್ದಾರೆ. ಇದರನ್ವಯ ನಗರದಲ್ಲಿನ ರಾಮನ ನಂಟಿನ ಪ್ರದೇಶಗಳ ಆಸುಪಾಸಿನ ಪ್ರದೇಶಗಳಲ್ಲಿ ಎಲ್ಲ ಮಾಂಸ ಮತ್ತು ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಲ್ಪಕಲೆಗಳ ವೈಭವ, ಪುರಾಣಗಳ ಚಿತ್ರಕಾವ್ಯ... ರಾಮಮಂದಿರ ಒಳಾಂಗಣದ First look!
ಶ್ರೀರಾಮ ಜನ್ಮಭೂಮಿ ಮತ್ತು ಮಂದಿರವನ್ನು ಅತ್ಯುನ್ನತ ಪವಿತ್ರ ಕ್ಷೇತ್ರವೆಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸುಮಾರು 150 ರಿಂದ 175 ಕಿ.ಮೀ ಮಾರ್ಗದಲ್ಲಿ ಈ ಆದೇಶ ಅನ್ವಯವಾಗಲಿದೆ ಎನ್ನಲಾಗಿದೆ.
ನಾಳೆ ಅಯೋಧ್ಯೆ ಏರ್ಪೋರ್ಟ್, 8 ರೈಲುಗಳಿಗೆ ಮೋದಿ ಚಾಲನೆ
ನವದೆಹಲಿ: ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ, ಮರು ಅಭಿವೃದ್ಧಿಗೊಂಡ ರೈಲು ನಿಲ್ದಾಣ ಸೇರಿದಂತೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ 11 ಸಾವಿರ ಕೋಟಿ ರು. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇದೇ ವೇಳೆ 6 ವಂದೇ ಭಾರತ್ ರೈಲು ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದು, ವಿಶ್ವ ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿಪಡಿಸಲು ₹4600 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯಲ್ಲಿ ಆಧುನಿಕ ಅಭಿವೃದ್ಧಿ, ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಪ್ರಧಾನಿ ಮೋದಿ ಅವರ ಕನಸಾಗಿದೆ. ನಗರದ ಶ್ರೀಮಂತ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಸಂಪರ್ಕವನ್ನು ಸುಧಾರಿಸುವ ಮತ್ತು ಅದರ ನಾಗರಿಕ ಸೌಲಭ್ಯಗಳನ್ನು ನವೀಕರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಹೇಳಿದೆ.
'ಜ.22ಕ್ಕೆ ಬಾಬ್ರಿ ಮಸೀದಿ ವಾಪಾಸ್ ಬರಲಿ ಎಂದು ಅಲ್ಲಾನಿಗೆ ಪ್ರಾರ್ಥಿಸುವೆ..' I.N.D.I.A ಮೈತ್ರಿಯ ಸಂಸದನ ಹೇಳಿಕೆ!
ಮೊದಲ ಹಂತದ ಅತ್ಯಾಧುನಿಕ ವಿಮಾನ ನಿಲ್ದಾಣವನ್ನು ₹1450 ಕೊಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದರ ಟರ್ಮಿನಲ್ ಕಟ್ಟಡವು 6500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರಲಿದ್ದು, ವಾರ್ಷಿಕವಾಗಿ 10 ಲಕ್ಷ ಜನರಿಗೆ ಸೇವೆ ನೀಡಲು ಸಜ್ಜಾಗಿದೆ. ಈ ಭಾಗದಲ್ಲಿ ರೈಲ್ವೆ ಸೌಲಭ್ಯಗಳನ್ನು ಸುಧಾರಿಸಲು ₹2300 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ರಾಮ ಮಂದಿರಕ್ಕೆ ಪ್ರವೇಶವನ್ನು ಹೆಚ್ಚಿಸಲು ನಾಲ್ಕು ರಸ್ತೆಗಳಾದ ರಾಮಪಥ, ಭಕ್ತಿಪಥ, ಧರ್ಮಪಥ ಮತ್ತು ಶ್ರೀ ರಾಮ ಜನ್ಮಭೂಮಿ ಪಥಗಳನ್ನು ಸಹ ಅವರು ಉದ್ಘಾಟಿಸಲಿದ್ದಾರೆ.