ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.  

ಗ್ಯಾಂಗ್ಟಕ್‌: ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಸೇನೆಯ ಪೂರ್ವ ಕಮಾಂಡ್‌ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಮೇಘಸ್ಫೋಟದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಸ್ಥಾಪಿಸಲಾಗಿದ್ದ ಕಟ್ಟಡಗಳಿಗೆ ಹಾನಿಯಾಗಿದೆ. ಮೇಘಸ್ಫೋಟ ಹಾಗೂ ಎಡೆಬಿಡದೇ ಸುರಿದ ಮಳೆಯಿಂದ ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಲಾಯ್ತು ಇದು ನೀರಿನ ಮಟ್ಟವು 15ರಿಂದ 20 ಅಡಿ ಎತ್ತರದವರೆಗೆ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಇದರ ಪರಿಣಾಮ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಲಾದ ಸೇನಾ ವಾಹನಗಳಿಗೆ ಹಾನಿಯಾಗಿದೆ. 23 ಸಿಬ್ಬಂದಿ ಯೋಧರು ನಾಪತ್ತೆಯಾಗಿದ್ದಾರೆ. ಹಲವು ವಾಹನಗಳು ಮುಳುಗಿವೆ ನಾಪತ್ತೆಯಾದವರ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆ ಹೇಳಿದೆ.

ಸಿಕ್ಕಿಂನಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘ ಸ್ಫೋಟದಿಂದಾಗಿ ನೀರು ಉಕ್ಕಿ ಹರಿಯಲು ಆರಂಭಿಸಿದ್ದು, ತೀಸ್ತಾ ನದಿಯಲ್ಲಿ ನೀರಿನ ಮಟ್ಟವನ್ನು ಹೆಚ್ಚಿಸಿತು. ಈ ತೀಸ್ತಾ ನದಿಯು ಬಾಂಗ್ಲಾದೇಶವನ್ನು ಪ್ರವೇಶಿಸುವ ಮೊದಲು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿಯುತ್ತದೆ. ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸಿಕ್ಕಿಂ (sikkim) ಆಡಳಿತವು ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸ್ಥಳೀಯ ನಿವಾಸಿಗಳು ಅಲ್ಲಿನ ಚಿತ್ರಣದ ವೀಡಿಯೋ ಹಂಚಿಕೊಂಡಿದ್ದು, ಭೀಕರ ಪ್ರವಾಹಕ್ಕೆ ರಸ್ತೆ ಕೊಚ್ಚಿ ಹೋಗುತ್ತಿರುವ ದೃಶ್ಯವಿದೆ.

ಯಾರೂ ಗಾಯಗೊಂಡಿಲ್ಲ ಆದರೆ ಸಾರ್ವಜನಿಕ ಆಸ್ತಿಗೆ ಭಾರಿ ಹಾನಿಯಾಗಿದೆ. ಸಿಂಗ್ಟಮ್‌ನಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಪ್ರೇಮ್ ಸಿಂಗ್ (Prem singh) ತಮಾಂಗ್ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಹೇಳಿದರು. 

ಈ ವರ್ಷದ ಭಾರತದ ಆರ್ಥಿಕತೆ ಪ್ರಗತಿ ದರ ಶೇ. 6.3: ವಿಶ್ವಬ್ಯಾಂಕ್‌

ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿನ ಸರೋವರವು ಉಕ್ಕಿ ಹರಿದ ನಂತರ ತೀಸ್ತಾ ನದಿ ತುಂಬಿಕೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. "ಗಜೋಲ್ಡೋಬಾ, ಡೊಮೊಹಾನಿ, ಮೆಖಲಿಗಂಜ್ ಮತ್ತು ಫಿಶ್‌ನಂತಹ ತಗ್ಗು ಪ್ರದೇಶಗಳು ಇದರಿಂದ ಮುಳುಗಡೆಯಾಗಬಹುದು. ದಯವಿಟ್ಟು ಜಾಗರೂಕರಾಗಿರಿ ಎಂದು ಎಂದು ಹವಾಮಾನ ಇಲಾಖೆ ಕಚೇರಿ ತಿಳಿಸಿದೆ.

Scroll to load tweet…
Scroll to load tweet…