ದೇಶದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ, ಅನ್‌ಲಾಕ್‌ 2 ನಿಯಮಗಳು ಜೂ.30ರ ಆಸುಪಾಸಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ನವದೆಹಲಿ(ಜೂ.26): ದೇಶದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ, ಅನ್‌ಲಾಕ್‌ 2 ನಿಯಮಗಳು ಜೂ.30ರ ಆಸುಪಾಸಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರಲ್ಲಿ ಸೀಮಿತ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದೆಹಲಿ- ನ್ಯೂಯಾರ್ಕ್, ಮುಂಬೈ- ನ್ಯೂಯಾರ್ಕ್ ಸೇರಿದಂತೆ ಇನ್ನಿತರ ಕೆಲ ನಿರ್ದಿಷ್ಟಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಕ್ಕೆ ಅವಕಾಶ ಲಭ್ಯವಾಗುವ ನಿರೀಕ್ಷೆಯಿದೆ. 

Fact Check: ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಜೊತೆಗೆ ಕೊಲ್ಲಿ ರಾಷ್ಟ್ರಗಳಿಗೆ ಸೇವೆ ನೀಡುವ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ವಿಮಾನಗಳ ಹಾರಾಟಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಕೇಂದ್ರ ಚಿಂತನೆ ನಡೆಸುತ್ತಿದೆ.

ಆದರೆ, ಶಾಲಾ-ಕಾಲೇಜು ಸೇರಿ ಶಿಕ್ಷಣ ಸಂಸ್ಥೆಗಳು, ಮೆಟ್ರೋ ರೈಲು ಸೇವೆಗಳ ಆರಂಭಕ್ಕೆ ರಾಜ್ಯಗಳು ಇನ್ನೂ ಹಿಂದೇಟು ಹಾಕುತ್ತಿವೆ. ಈ ಹಿನ್ನೆಲೆಯಲ್ಲಿ ಈ ಸೇವೆಗಳಿಗೆ ಗ್ರೀನ್‌ ಸಿಗ್ನಲ್‌ ನೀಡದಿರಲು ನಿರ್ಧರಿಸಲಾಗಿದೆ ಎನ್ನಲಾಗಿದೆ.