ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.  ರಾಂಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಅವರನ್ನು ಇದೀಗ ಹೆಚ್ಚಿನ ಚಿಕಿತ್ಸೆಗಗಾಗಿ ದೆಹಲಿಯ ಏಮ್ಸ್ ಆಸ್ಪ್ರೆಗೆ ಸ್ಥಳಾಂತರ ಮಾಡಲಾಗಿದೆ. 

ನವದೆಹಲಿ(ಜ.23): ಬಿಹಾರ ಮಾಜಿ ಮುಖ್ಯಮಂತ್ರಿ, ಮೇವು ಹಗರಣದಲ್ಲಿ ಜೈಲು ಸೇರಿರುವ ಲಾಲೂ ಪ್ರಸಾದ್ ಯಾದವ್ ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕಾಗಿ ರಾಂಚಿಯ RIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇದೀಗ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಡೆಯಲಾಗದ ಸ್ಥಿತಿಗೆ ಲಾಲುಯಾದವ್‌ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣ ...

ಕಳೆದ ರಾತ್ರಿ RIMS ಆಸ್ಪತ್ರೆಗೆ ದೌಡಾಯಿಸಿದ್ದ ಲಾಲೂ ಪುತ್ರ ತೇಜಸ್ವಿ ಯಾದವ್, ಲಾಲೂ ಪತ್ನಿ ರಾಬ್ರಿ ದೇವಿ ಇದೀಗ ದೆಹಲಿ ಆಸ್ಪತ್ರೆಗೆ ತೆರಳಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಲಾಲೂಗೆ ಕಳೆದೆರಡು ದಿನಗಳಿಂದ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೀಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ನಿಘಾ ಘಟಕಕ್ಕೆ ದಾಖಲಿಸಲು ರಾಂಚಿ ಆಸ್ಪತ್ರೆ ವೈದ್ಯರು ಸೂಚಿಸಿದ್ದಾರೆ.

ಜೈಲಿನಿಂದ ಆಸ್ಪತ್ರೆ ದಾಖಲಾಗಿದ್ದ ಲಾಲೂ ಪ್ರಸಾದ್ ಯಾದವ್‌ಗೆ ಇನ್ನೂ ಬೇಲ್ ಸಿಕ್ಕಿಲ್ಲ. ಹೀಗಾಗಿ ದೆಹಲಿಗೆ ಸ್ಥಳಾಂತರಿಸಲು ಅನುಮತಿ ಪಡೆಯಲಾಗಿದೆ. ಏರ್ ಆ್ಯಂಬುಲೆನ್ಸ್ ಮೂಲಕ ಲಾಲೂ ಪ್ರಸಾದ್ ಯಾದವ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ