ನಕಲಿ ಟಿಆರ್‌ಪಿ ಹಗರಣದಲ್ಲಿ ಬಂಧಿತರಾಗಿದ್ದ ಬಾರ್ಕ್ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ| ಪಾರ್ಥೋ ದಾಸ್‌ಗುಪ್ತಾ ಅನಾರೋಗ್ಯ|  ಜೆಜೆ ಆಸ್ಪತ್ರೆಗೆ ದಾಖಲು

ಮುಂಬೈ(j.೧೭): ನಕಲಿ ಟಿಆರ್‌ಪಿ ಹಗರಣದಲ್ಲಿ ಬಂಧಿತರಾಗಿದ್ದ ಬಾರ್ಕ್ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಇಲ್ಲಿನ ಜೆಜೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿದ್ದ ದಾಸ್‌ಗುಪ್ತಾರ ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರ ಹೆಚ್ಚಾದ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಿ ಕೃತಕ ಉಸಿರಾಟ ವ್ಯವಸ್ಥೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಟಿಆರ್‌ಪಿ ಹಗರಣ ಸಂಬಂಧ ದಾಸ್‌ಗುಪ್ತಾ ಅವರನ್ನು ಮುಂಬೈ ಪೊಲೀಸರು ಡಿ.24ರಂದು ಬಂಧಿಸಿದ್ದರು. ಜಾಮೀನು ಕೋರಿ ದಾಸ್‌ಗುಪ್ತಾ ಸಲ್ಲಿಸಿದ್ದ ಮನವಿಯನ್ನು ಇತ್ತೀಚೆಗೆ ಮುಂಬೈ ಕೋರ್ಟ್‌ ತಿರಸ್ಕರಿಸಿತ್ತು.