Asianet Suvarna News Asianet Suvarna News

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ!

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಪ್ರಣಬ್ ಮುಖರ್ಜಿ ಇಂದು(ಆ.31) ಕೊನೆಯುಸಿರೆಳೆದಿದ್ದಾರೆ.

Former president of India Pranab Mukherjee passed away at Army hospital in the National Capital Delhi
Author
Bengaluru, First Published Aug 31, 2020, 6:17 PM IST

ದೆಹಲಿ(ಆ.31): ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ಕೋಮಾಗೆ ಜಾರಿದ್ದ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು(ಆ.31) ನಿಧನರಾಗಿದ್ದಾರೆ. ಆರ್ಮಿ ರಿಸರ್ಚ್ ಅಂಡ್ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷದ ಪ್ರಣಬ್ ಮುಖರ್ಜಿ ಇಹಲೋಕ ತ್ಯಜಿಸಿದ್ದಾರೆ.

"

ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದ ಪ್ರಣಬ್ ಮುಖರ್ಜಿಗೆ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರ(ಆ.31) ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು. ತೀವ್ರ ಅನಾರೋಗ್ಯದಿಂದ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಪ್ರಣಬ್ ಮುಖರ್ಜಿಯನ್ನು ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವ ರಕ್ಷಣೆಗಾಗಿ ಮೆದುಳಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಿ ಚಿಕಿತ್ಸೆ ಬಳಿಕ ಪ್ರಣಬ್ ಆರೋಗ್ಯ ತೀವ್ರ ಹದಗೆಟ್ಟಿತ್ತು. 

ಪ್ರಣಬ್ ಮಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

 

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ!... #PranabMukherjee #RIP #FormerPresident #India https://kannada.asianetnews.com/india-news/former-president-of-india-pranab-mukherjee-passed-away-at-army-hospital-in-the-national-capital-delhi-qfxi7c

ಪ್ರಣಬ್ ಮುಖರ್ಜಿ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಿಂದ 2017 ರ ವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ.  ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಪ್ರಣಬ್ ಮುಖರ್ಜಿ 2009ರಿಂದ 2012ರ ವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2019ರಲ್ಲಿ ಪ್ರಣಬ್ ಮುಖರ್ಜಿಗೆ ಕೇಂದ್ರ ಸರ್ಕಾರ ಭಾರತ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. 1969ರಲ್ಲಿ ಪ್ರಣಬ್ ಮುಖರ್ಜಿ ರಾಜಕೀಯ ಪ್ರವೇಶಿಸಿದರು, 

"

 

Follow Us:
Download App:
  • android
  • ios