ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪರಿಸ್ಥಿತಿ ಗಂಭೀರ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಸದ್ಯ ಕೋಮಾ ಸ್ಥಿತಿಯಲ್ಲಿ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ(ಆ.14): ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ಚಿಂತಾಜನಕ ಸ್ಥಿತಿಗೆ ತಲುಪಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ದೇಹ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅವರು ಕೋಮಾದಲ್ಲಿ ಇದ್ದಾರೆ ಹಾಗೂ ವೆಂಟಿಲೇಟರ್ ಸಹಾಯದಲ್ಲಿದ್ದಾರೆ ಎಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ಗುರುವಾರ ತಿಳಿಸಿದೆ.
ಈ ನಡುವೆ, ಪ್ರಣಬ್ ಅವರು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಣಬ್ ಕೊನೆಯುಸಿರೆಳೆದಿದ್ದಾರೆ ಎನ್ನುವ ಪೋಸ್ಟ್‌ಗಳು ಸಾಕಷ್ಟು ವೈರಲ್ ಆಗಿದ್ದವು. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಪ್ರಣಬ್ ಕಿಡಿಕಾರಿದ್ದರು. ನನ್ನ ತಂದೆ ಜೀವಂತವಾಗಿದ್ದಾರೆ, ಆರೋಗ್ಯ ಸ್ಥಿರವಾಗಿದೆ. ಕೆಲ ಪ್ರತಿಷ್ಠಿತ ಪತ್ರಕರ್ತರು ಪ್ರಣಬ್ ಮುಖರ್ಜಿ ಕೊನೆಯುಸಿರೆಳೆದಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹರಡುತ್ತಿರುವುದು ನೋವುಂಟು ಮಾಡಿದೆ ಎಂದು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿದ್ದರು.
ಪ್ರಣಬ್ ಮುಖರ್ಜಿ ಜೀವಂತವಾಗಿದ್ದಾರೆ, ಸುಳ್ಳು ಹರಡುವ ಬದಲು ಚೇತರಿಕೆಗೆ ಪ್ರಾರ್ಥಿಸಿ ಎಂದ ಪುತ್ರ!
ಪ್ರಣಬ್ ಅವರು ಆ.10ರಂದು ತಪಾಸಣೆಗೆ ಹೋದಾಗ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು. ಜತೆಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿತ್ತು. ಹೀಗಾಗಿ ಅದೇ ದಿನ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.